ದೇವಭೂಮಿಯಲ್ಲಿ ವರುಣಾರ್ಭಟ: ಶಿವ ದೇಗುಲ ಕುಸಿದು 9 ಭಕ್ತರ ಸಾವು

Published : Aug 14, 2023, 01:06 PM ISTUpdated : Aug 14, 2023, 01:31 PM IST
ದೇವಭೂಮಿಯಲ್ಲಿ ವರುಣಾರ್ಭಟ:  ಶಿವ ದೇಗುಲ ಕುಸಿದು 9 ಭಕ್ತರ ಸಾವು

ಸಾರಾಂಶ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಗೆ ದೇಗುಲವೊಂದು ಕುಸಿದ ಪರಿಣಾಮ 9 ಜನ ಸಾವಿಗೀಡಾದ ದುರಂತ ನಡೆದಿದೆ.  

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಗೆ ದೇಗುಲವೊಂದು ಕುಸಿದ ಪರಿಣಾಮ 9 ಜನ ಸಾವಿಗೀಡಾದ ದುರಂತ ನಡೆದಿದೆ.  ಹಿಮಾಚಲ ಪ್ರದೇಶದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತವಾಗುತ್ತಿದೆ. ಭೂಕುಸಿತದ ಪರಿಣಾಮ ಶಿವ ದೇಗುಲವೂ ಕುಸಿದಿದ್ದು, 9 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 
12ಕ್ಕೂ ಹೆಚ್ಚು ಜನ ದೇಗುಲದ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸಿಖು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಸಮ್ಮರ್ ಹಿಲ್ ಪ್ರದೇಶದ ಸಮೀಪವಿರುವ ದೇಗುಲ ಕುಸಿದು ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಸಿಎಂ ಭೇಟಿ ನೀಡಿದ್ದು, ರಕ್ಷಣಾ ಕಾರ್ಯವನ್ನು ಗಮನಿಸಿದ್ದಾರೆ. 

ವಿನಾಶಕಾರಿಯಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಶಿಮ್ಲಾದ ಸಮ್ಮರ್‌ಹಿಲ್ ಬಳಿಯ ಶಿವ ದೇವಾಲಯದ ಬಳಿ ಭೂಕುಸಿತ ಸಂಭವಿಸಿದೆ ಇದರಿಂದಾಗಿ ಅನೇಕ ಜನರು ಸಮಾಧಿಯಾಗಿದ್ದಾರೆ. ಕೆಲವರು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ನಾನು ಘಟನಾ ಸ್ಥಳದಲ್ಲೇ ಇದ್ದೇನೆ. ರಕ್ಷಣಾ ಕಾರ್ಯವು ಸಮರೋಪಾದಿಯಲ್ಲಿ ನಡೆಯುತ್ತಿದೆ.  ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಟ್ವಿಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರವಾಸಿಗರಿಗೊಂದು ಮನವಿ: ಮಳೆ ನಿಲ್ಲೋವರೆಗೂ ಚಿಕ್ಕಮಗಳೂರು ಪ್ರವಾಸಕ್ಕೆ ಬರಬೇಡಿ

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಈ ದೇಗುಲಕ್ಕೆ ಭಕ್ತರು ಪೂಜೆ ಮಾಡುವುದಕ್ಕಾಗಿ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ ಘಟನೆ ನಡೆಯುವ ವೇಳೆ ದೇಗುಲದಲ್ಲಿ ಸುಮಾರು  50 ಜನರಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅವಶೇಷಗಳನ್ನು ತೆರವುಗೊಳಿಸಿ ಕೆಳಗೆ ಸಿಲುಕಿರುವವರನ್ನು ರಕ್ಷಿಸಲು  ಸ್ಥಳೀಯಾಡಳಿತವೂ ಸಮಾರೋಪಾದಿಯಲ್ಲಿ ಶ್ರಮಿಸುತ್ತಿದೆ.  ಇದುವರೆಗೆ ಘಟನಾ ಸ್ಥಳದಿಂದ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮಳೆ ಸಂಬಂಧಿ ಘಟನೆಗಳಿಂದಾಗಿ  ಭಾನುವಾರದಿಂದ ಇಲ್ಲಿಯವರೆಗೆ ಸುಮಾರು 21 ಜನರು ಸಾವಿಗೀಡಾಗಿದ್ದಾರೆ ಎಂದು ವರದಿ ಆಗಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ 48 ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಯಾಸ್ ನದಿಯ ನೀರಿನ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಹಿಮಾಚಲ ಪ್ರದೇಶದ ಸೊಲನ್‌ನಲ್ಲಿಯೂ ಮೇಘಸ್ಫೋಟಕ್ಕೆ 7 ಜನ ಮೃತಪಟ್ಟಿದ್ದಾರೆ. ಇಲ್ಲಿನ ಜಡೋನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. 6 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಭಾರೀ ಮಳೆಗೆ ಹೊಳೆಯಂತಾದ ಹರಿಯಾಣ ರಸ್ತೆ: ಬೆಂಗಳೂರು ಟ್ರೋಲ್ ಮಾಡಿದವರು ಈಗೇನ್ ಅಂತಾರೆ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿರೋಧದ ಮಧ್ಯೆ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಶಂಕು
ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌