ಬಿಜೆಪಿ ಸಂಸದ ರಾಮ್‌ ಸ್ವರೂಪ್ ಶರ್ಮಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

Published : Mar 17, 2021, 10:44 AM ISTUpdated : Mar 17, 2021, 10:50 AM IST
ಬಿಜೆಪಿ ಸಂಸದ ರಾಮ್‌ ಸ್ವರೂಪ್ ಶರ್ಮಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಸಾರಾಂಶ

ಬಿಜೆಪಿ ಸಂಸದ ರಾಮ್‌ ಸ್ವರೂಪ್ ಶರ್ಮಾ ನಿಗೂಢ ಸಾವು| ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದ ರಾಮ್ ಸ್ವರೂಪ್ ಶರ್ಮಾ| ನೇಣು ಬಿಗಿದ ಸ್ಥಿತಿಯಲ್ಲಿ ಸಂಸದರ ಶವ ಪತ್ತೆ| ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಿದ ಪೊಲೀಸರು

ನವದೆಹಲಿ(ಮಾ.17): ಬಿಜೆಪಿ ಸಂಸದ ರಾಮ್‌ ಸ್ವರೂಪ್ ಶರ್ಮಾ ನಿಗೂಢವಾಗಿ ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದ ರಾಮ್‌ಸ್ವರೂಪ್ ಶರ್ಮಾ ಶವ ದೆಹಲಿಯ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದ ರಾಮ್ ಸ್ವರೂಪ್ ಶರ್ಮಾ ದೇಹ ದೆಹಲಿಯ ನಾರ್ತ್ ಅವೆನ್ಯೂ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಸಂಸದೀಯ  ಮಂಡಳಿ ಸಭೆಯನ್ನು ಮುಂದೂಡಲಾಗಿದೆ.

1958 ರಲ್ಲಿ ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಜನಿಸಿದ್ದ ಶರ್ಮಾ 2014 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು. 2019ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರು. ಜೋಗಿಂದರ್ ನಗರದ ರಾಜಕಾರಣಿ ರಾಮ್‌ ಸ್ವರೂಪ್ ಶರ್ಮಾ, ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದರು.

ಶರ್ಮಾ ಅವರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

 

 

ಮಂಡಿ ಜಿಲ್ಲೆಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿಯಾಗಿದ್ದರು. ಇನ್ನು ಆತ್ಮಹತ್ಯೆಗೆ ಕಾರಣವೇನು ಎಂಬುವುದಕ್ಕೆ ನಿಖರ ಮಾಹಿತಿ ಸಿಕ್ಕಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!