ಅಮೆರಿಕದಲ್ಲಿ ಹಿಂದೂ ದೇಗುಲ ವಿರೂಪ: ಮೋದಿ ವಿರುದ್ಧ ಬರಹ!

Published : Mar 10, 2025, 04:29 AM ISTUpdated : Mar 10, 2025, 07:38 AM IST
ಅಮೆರಿಕದಲ್ಲಿ ಹಿಂದೂ ದೇಗುಲ ವಿರೂಪ: ಮೋದಿ ವಿರುದ್ಧ ಬರಹ!

ಸಾರಾಂಶ

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ವಾಮಿನಾರಾಯಣ ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ಹಾಗೂ ಪ್ರಧಾನಿ ಮೋದಿ ವಿರುದ್ಧ ಬರಹಗಳನ್ನು ಗೀಚಿ ವಿರೂಪಗೊಳಿಸಲಾಗಿದೆ. ಈ ಕೃತ್ಯವನ್ನು ಭಾರತ ಖಂಡಿಸಿದ್ದು, ದೇವಸ್ಥಾನಕ್ಕೆ ಭದ್ರತೆಗೆ ಆಗ್ರಹಿಸಿದೆ.

ನ್ಯೂಯಾರ್ಕ್‌ (ಮಾ.10): ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿನಾರಾಯಣ ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಬರಹಗಳನ್ನು ಗೀಚಿ ವಿರೂಪಗೊಳಿಸಲಾಗಿದೆ. ಲಾಸ್‌ ಎಂಜಲೀಸ್‌ ಬಳಿಯ ಸ್ಯಾನ್‌ ಬರ್ನಾರ್ಡಿನೊದ ಚಿನೋ ಹಿಲ್ಸ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ದುಷ್ಕೃತ್ಯ ನಡೆಸಲಾಗಿದೆ.

ಕೃತ್ಯ ಯಾರು ಎಸಗಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ ಅಮೆರಿಕದಲ್ಲಿ ಖಲಿಸ್ತಾನಿಗಳು ಜನಮತಗಣನೆ ಮಾಡುವ ದಿನ ಸಮೀಪಿಸುತ್ತಿರುವ ಹೊತ್ತಿನಲಲ್ಲೇ ಈ ಘಟನೆ ನಡೆದಿರುವ ಕಾರಣ ಅವರ ಮೇಲೆ ಶಂಕೆ ಇದೆ. ಇದರ ಬೆನ್ನಲ್ಲೇ ಭಾರತ ಸರ್ಕಾರ ಈ ಕೃತ್ಯವನ್ನು ಖಂಡಿಸಿದ್ದು, ದೇವಸ್ಥಾನಕ್ಕೆ ಭದ್ರತೆಗೆ ಆಗ್ರಹಿಸಿದೆ.

ಘಟನೆಯ ಮಾಹಿತಿ ನೀಡಿರುವ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ‘ಬೋಚಾಸನವಾಸಿ ಅಕ್ಷರ್‌ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ’ (ಬಿಎಪಿಎಸ್‌- ಬಾಪ್ಸ್‌), ‘ಹಿಂದೂ ಸಮುದಾಯ ದ್ವೇಷದ ವಿರುದ್ಧ ಧೃಡವಾಗಿ ನಿಂತಿದೆ. ಚಿನೋ ಹಿಲ್ಸ್‌ ಹಾಗೂ ದಕ್ಷಿಣ ಕ್ಯಾಲಿಫೋರ್ನಿಯಾದ ಸಮುದಾಯ ದ್ವೇಷ ಬೇರೂರಲು ಬಿಡುವುದಿಲ್ಲ. ನಮ್ಮ ಮಾನವೀಯತೆ ಮತ್ತು ನಂಬಿಕೆಯು ಶಾಂತಿ ಹಾಗೂ ಸಹಾನುಭೂತಿ ಮೇಲುಗೈ ಸಾಧಿಸುವುದನ್ನು ಖಚಿತಪಡಿಸುತ್ತದೆ’ ಎಂದಿದೆ. ಜತೆಗೆ ಖಲಿಸ್ತಾನಿಗಳ ಜನಮತಗಣನೆಗೂ ಮುನ್ನ ಈ ಘಟನೆ ನಡೆದಿರುವ ಕಾರಣ ಅವರ ಮೇಲೆ ಗುಮಾನಿ ವ್ಯಕ್ತಪಡಿಸಿದೆ,

ಇತ್ತೀಚೆಗೆ 10 ದೇಗುಲ ಮೇಲೆ ದಾಳಿ:

ಕಳೆದ ಕೆಲ ವರ್ಷಗಳಲ್ಲಿ 10 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಲಾಗಿದೆ ಅಥವಾ ದೋಚಲಾಗಿದೆ ಎಂದು ಉತ್ತರ ಅಮೆರಿಕಾದ ಹಿಂದೂಗಳ ಒಕ್ಕೂಟ ಮಾಹಿತಿ ನೀಡಿದೆ. 2024ರ ಸೆಪ್ಟೆಂಬರ್‌ನಲ್ಲಿ ಸ್ಯಾಕ್ರಮೆಂಟೊದಲ್ಲಿನ ಬಿಎಪಿಎಸ್‌ ದೇವಾಲಯದ ಗೋಡೆ ಮೇಲೆ ‘ಹಿಂದೂಗಳೇ ಹಿಂತಿರುಗಿ’ ಎಂದು ಬರೆಯಲಾಗಿತ್ತು. 

ಇದನ್ನೂ ಓದಿ: BL Santhosh: ರಾಹುಲ್‌ ಗಾಂಧಿ ಆ ಪುಸ್ತಕದ ಎರಡನೇ ಪುಟವನ್ನ ಓದಲೇ ಇಲ್ಲ | Kannada News | Suvarna News

ಭಾರತದಿಂದ ಖಂಡನೆ:

ಹಿಂದೂ ದೇಗುಲ ವಿರೂಪಗೊಳಿಸಿದ್ದನ್ನು ಖಂಡಿಸಿರುವ ಭಾರತ, ಈ ದುಷ್ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್‌ ಜೈಸ್ವಾಲ್‌ ಪ್ರತಿಕ್ರಿಯಿಸಿ, ‘ಇಂತಹ ಹೇಯ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ಇದರಲ್ಲಿ ತೊಡಗಿರುವವರ ವಿರುದ್ಧ ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು, ದೇವಸ್ಥಾನಕ್ಕೆ ಸೂಕ್ತ ಭದ್ರತೆ ಒದಗಿಸಬೇಕು’ ಎಂದ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧಾರ್ಮಿಕ ಪ್ರಾರ್ಥನೆಗೆ ಧ್ವನಿವರ್ಧಕ ಕಡ್ಡಾಯವಲ್ಲ : ಹೈಕೋರ್ಟ್‌
ಭಾರತ ಎಂದಿಗೂ ಶಾಂತಿ ಪರ : ಪುಟಿನ್‌ಗೆ ಮೋದಿ