ಉನ್ನತ ಮಟ್ಟದ ಸಭೆ ಕರೆದ ಕೇಂದ್ರ ಗೃಹ ಸಚಿವ ಅಮಿತ್ ಶಾ!

By Suvarna NewsFirst Published Jun 18, 2021, 6:26 PM IST
Highlights
  • ಕೊರೋನಾ ನಡುವೆ ಅಭಿವೃದ್ಧಿ ಕಾರ್ಯ ಚುರುಕು
  • ಅಭಿವೃದ್ಧಿ ಯೋಜನೆಗಳ ಸ್ಥಿತಿಗತಿಗೆ ಪರಿಶೀಲನೆಗೆ ಉನ್ನತ ಮಟ್ಟದ ಸಭೆ
  • ಅಮಿತ್ ಶಾ ಸಭೆಯಲ್ಲಿ ಚೀಫ್ ಸೆಕ್ರೆಟರಿ ಸೇರಿದಂತೆ ಪ್ರಮುಖರು ಭಾಗಿ

ನವದೆಹಲಿ(ಜೂ.18):  ಕೊರೋನಾ ವೈರಸ್ ಸಂಕಷ್ಟದ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಯೋಜನೆಗಳ ಸ್ಥಿತಿಗತಿ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.  ಕೇಂದ್ರಾಡಳಿತ ಪ್ರದೇಶದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕೇಂದ್ರ ಸಚಿವ ಸಂಪುಟಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಎಂಟ್ರಿ?

Latest Videos

ದೆಹಲಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಮಿತ್ ಶಾ ಜೊತೆ  ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಅಭಿವೃದ್ಧಿ ಯೋಜನೆಗಳ ಕುರಿತು ಅಮಿತ್ ಶಾ ಅತೀವ ಆಸಕ್ತಿ ತೋರಿದ್ದಾರೆ. ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುತ್ತಿದೆಯೇ ಎಂದು ಪರಿಶೀಲಿಸಲಿದ್ದಾರೆ.

NRC ಜಾರಿಯಾದರೂ ಗೂರ್ಖಾಗಳನ್ನು ಹೊರದಬ್ಬುವುದಿಲ್ಲ; ಸ್ಪಷ್ಟನೆ ನೀಡಿದ ಅಮಿತ್ ಶಾ!

ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶದಲ್ಲಿ ವ್ಯಾಪಾರ, ವಹಿವಾಟು ಸೇರಿದಂತೆ ಸರ್ವತೋಮುಖ ಅಭಿವೃದ್ಧಿ ಕುರಿತು ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.   ಹೆದ್ದಾರಿಗಳ ನಿರ್ಮಾಣ, ನೀರು ಸರಬರಾಜು ಮತ್ತು ಪ್ರವಾಹ ಸಂರಕ್ಷಣಾ ಯೋಜನೆಗಳು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುದ್ದೀಕರಣ, ವಸತಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಬೆಳವಣಿಗೆಗೆ  ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಆರಂಭಿಸಿದೆ.

click me!