
ನವದೆಹಲಿ(ಮೇ.09): ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ನಡೆದ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಅಮಿತ್ ಶಾ ಬಸವಳಿದಂತೆ ಕಂಡಿದ್ದರು. ಈ ಫೋಟೋ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೇ ಫೋಟೋ ಹಿಡಿದು ಪತ್ರಕರ್ತರೊಬ್ಬರು ಅಮಿತ್ ಶಾಗೆ ಕ್ಯಾನ್ಸರ್ ಎಂದು ಟ್ವೀಟ್ ಮಾಡಿದ್ದರು. ಇದೀಗ ಸ್ವತಃ ಅಮಿತ್ ಶಾ ತಮ್ಮ ಆರೋಗ್ಯ ಕುರಿತು ಸ್ಪಷ್ಟನೆ ನೀಡಿದ್ದಾರೆ.
"
ಮದ್ಯ ಮಾರಾಟ ಬೇಡವೇ ಬೇಡ ಅಂತ ಕೂತಿದ್ರು ಅಮಿತ್ ಶಾ..!
ಕಳೆದ ಕೆಲದಿನಗಳಿಂದ ಆರೋಗ್ಯ ಕುರಿತು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಾನು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದ ಕಾರಣ ಸಾಮಾಜಿಕ ಜಾಲತಾಣದ ಕುರಿತು ಹೆಚ್ಚಿನ ಗಮನ ಹರಿಸಿಲ್ಲ. ಆದರೆ ಹಲವರು ಶೀಘ್ರದಲ್ಲೇ ಆರೋಗ್ಯ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದರು. ಹೀಗಾಗಿ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ಖಾಯಿಲೆಯಿಂದಲೂ ಬಳಲುತ್ತಿಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದು 55 ವರ್ಷದ ಅಮಿತ್ ಶಾ ಹೇಳಿದ್ದಾರೆ.
ಹೊರಗೆಲ್ಲೂ ಕಾಣಿಸಕೊಳ್ಳದ ಅಮಿತ್ ಶಾ ತೆರೆಮರೆಯಲ್ಲಿ ಏನ್ಮಾಡ್ತಿದ್ದಾರೆ?
ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಅಮಿತ್ ಶಾ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಹಲವರು ನನ್ನ ಸಾವಿನ ಕುರಿತು ಸಂದೇಶ ಕಳುಹಿಸಿದ್ದಾರೆ. ಗೃಹ ಸಚಿವನಾಗಿ ನನ್ನ ಮೇಲಿನ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದೇನೆ. ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡುವುದರಿಂದ ನನ್ನ ಆರೋಗ್ಯ ಮತ್ತಷ್ಚು ಉತ್ತಮವಾಗಲಿದೆ ಎಂದು ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ