ಅಮಿತ್ ಶಾ ಸಂಪೂರ್ಣ ಚೇತರಿಕೆ; ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್!

Published : Aug 29, 2020, 06:55 PM ISTUpdated : Aug 29, 2020, 06:57 PM IST
ಅಮಿತ್ ಶಾ ಸಂಪೂರ್ಣ ಚೇತರಿಕೆ; ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಸಾರಾಂಶ

ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಮತ್ತೆ ಆರೋಗ್ಯ ಸಮಸ್ಯೆ ಕಾಣಿಕೊಂಡ ಕಾರಣ ಆಸ್ಪತ್ರೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಪೂರ್ಣ ಗುಣಮುಖರಾಗಿದ್ದಾರೆ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ನವದೆಹಲಿ(ಆ.29): ಸತತ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಪೂರ್ಣ ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಆಗಸ್ಟ್ 12 ರಂದು ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪ್ರೆಗೆ ದಾಖಲಾಗಿದ್ದರು. ಕೊರೋನಾ ವೈರಸ್‌ನಿಂದ ಗುಣಮುಖರಾದ ಅಮಿತ್ ಶಾಗೆ ಸುಸ್ತು ಸೇರಿದಂತೆ ಇತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಕಳೆದ 12ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅಮಿತ್ ಶಾ ಗುಣಮುಖರಾಗಿದ್ದ, ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಏಮ್ಸ್ ಸ್ಪಷ್ಟಪಡಿಸಿದೆ.

ಒಂದು ವಾರದಲ್ಲಿ 2 ಪರೀಕ್ಷೆ: ಅಮಿತ್ ಶಾ ಕೊರೋನಾ ವರದಿ ನೆಗಟೀವ್!..

ಆಗಸ್ಟ್ 2 ರಂದು ಕೊರೋನಾ ವೈರಸ್ ಕಾರಣ ಅಮಿತ್ ಶಾ ಆಸ್ಪತ್ರೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಅಮಿತ್ ಶಾ ಕೊರೋನಾ ವರದಿ ನೆಗಟೀವ್ ಬಂದಿತ್ತು. ಆಗಸ್ಟ್ 14 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತ್ ಶಾ, ಆಗಸ್ಟ್ 17 ರಂದು 2ನೇ ಬಾರಿಗೆ ಆಸ್ಪತ್ರೆ ದಾಖಲಾಗಿದ್ದರು. 

ಆಗಸ್ಚ್ 24 ರಂದು ಏಮ್ಸ್ ಆಸ್ಪತ್ರೆ ಅಮಿತ್ ಶಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದರು. ಈ ವೇಳೆ ಅಮಿತ್ ಶಾ ಸಂಪೂರ್ಣ ಆರೋಗ್ಯವಾಗಿದ್ದಾರೆ. ಸರ್ಕಾರಿ ಕಡತಗಳ ಪರೀಶೀಲನೆಯನ್ನು ಆಸ್ಪತ್ರೆಯಿಂದಲೇ ಮಾಡುತ್ತಿದ್ದಾರೆ. ಅಮಿತ್ ಶಾಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು.

ಇದೀಗ ಏಮ್ಸ್ ಆಸ್ಪತ್ರೆ ಅಮಿತ್ ಶಾ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಹೀಗಾಗಿ ಡಿಸ್ಚಾರ್ಜ್ ಮಾಡುವುದಾಗಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು