Breaking: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ವಕ್ಕರಿಸಿದ ಕೊರೋನಾ

By Suvarna News  |  First Published Aug 2, 2020, 5:07 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ವಕ್ಕರಿಸಿದ್ದು, ಅವರ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರುವಾಗಿದೆ:

ನವದೆಹಲಿ, (ಆ.02): ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

"

Tap to resize

Latest Videos

ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದು, ಕೊರೋನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ  ನಾನು ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ, ಆದರೆ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಐಸೋಲೇಶನ್‌ಗೆ ಒಳಗಾಗಿ, ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.  

ಕೊರೋನಾ ಗೆದ್ದ ಚಿತ್ರ​ದು​ರ್ಗದ 105ರ ಅಜ್ಜಿ

ಸದ್ಯ ಅಮಿತ್ ಶಾ ಅವರು ನವದೆಹಲಿಯ ಮೇದಾಂತ ಆಸ್ಪತ್ರೆಗೆ ಅಮಿತ್ ಶಾ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೇ ಕಳೆದ 5 ದಿನಗಳ ಹಿಂದೆ ಕೇಂದ್ರ ಸಚಿವ ಸಂಪುಟ ಸಭೆ ನಡೆದಿತ್ತು.

ಈ ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ ಭಾಗವಹಿಸಿದ್ದರು. ಹೀಗಾಗಿ ಕೇಂದ್ರ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದಂತ ಇತರೆ ಸಚಿವರಿಗೂ ಕೊರೋನಾ ಭೀತಿ ಎದುರಾಗಿದೆ. ಈಗಾಗಲೇ ಕೇಂದ್ರ ಗೃಹ ಸಚಿವರ ಕಾರ್ಯದರ್ಶಿಯವರು ಹೋಂ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದುಬಂದಿದೆ.

"

कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।

— Amit Shah (@AmitShah)

click me!