ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಪ್ರತಿಭಟನೆ| ಕರ್ನಾಟಕದಲ್ಲೂ ಕಾಯ್ದೆ ವಿರೋಧಿಸಿ ಭಾರೀ ಪ್ರತಿಭಟನೆ| ತುರ್ತು ಸಭೆ ಕರೆದ ಕೇಂದ್ರ ಗೃಹ ಸಚಿವ ಅಮಿತ್ ಶಾ| ಸಭೆಯಲ್ಲಿ ಭಾಗವಹಿಸಲಿರುವ ಅಜಿತ್ ಧೋವಲ್, ಜಿ. ಕಿಶನ್ ರೆಡ್ಡಿ, ಅಜಯ್ ಕುಮಾರ್ ಭಲ್ಲಾ| ಭದ್ರತಾ ಸ್ಥಿತಿಗತಿ ಕುರಿತು ತುರ್ತು ಸಭೆ ಕರೆದ ಅಮಿತ್ ಶಾ|
ನವದೆಹಲಿ(ಡಿ.19): ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಪ್ರತಿಭಟನೆ ಜೋರಾಗಿದ್ದು, ಕರ್ನಾಟಕದಲ್ಲೂ ಕಾಯ್ದೆ ವಿರೋಧಿಸಿ ಭಾರೀ ಪ್ರತಿಭಟನೆ ನಡೆಯುತ್ತಿದೆ.
ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳು: ಕಷ್ಟ ಹೇಳುವ ಸರಣಿ ಲೇಖನಗಳು!
undefined
ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಸ್ಥಿತಿಗತಿ ಕುರಿತು ತುರ್ತು ಸಭೆ ಕರೆದಿದ್ದಾರೆ.
ಹೆಣ್ಣುಮಕ್ಕಳನ್ನು ಹೊತ್ತೊಯ್ದು..ಗಂಗಾರಾಮ್ ಮಾತಿಗೆ ಕಣ್ಣಂಚು ತೊಯ್ದು!
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಕೇಂದ್ರ ಗೃಹ ಖಾತೆ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಓಡಿ ಬರುವುದು ಬಿಟ್ಟರೆ ಬೇರೇನು ಮಾರ್ಗ?: ಸೋನ್‌ದಾಸ್ ಪ್ರಕಾರ ಭಾರತವೇ ಸ್ವರ್ಗ!
Union Ministry of Home Affairs to hold a review meeting later today over the protests against in different parts of the country. pic.twitter.com/vP2ad7N0pW
— ANI (@ANI)ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯನ್ನು ತಹಬದಿಗೆ ತರುವ ಹಾಗೂ ಭದ್ರತೆಯ ಸ್ಥಿತಿಗತಿಯ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನಮ್ಮದೇ ಜಮೀನಲ್ಲಿ ನಾವು ಜೀತದಾಳು: ಧರ್ಮವೀರ್ ಸಂಕಟ ತರಿಸಿದ ಅಳು!