ಲಾಕ್‌ಡೌನ್, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ: ಏನಿದೆ ಏನಿಲ್ಲ?

Published : Apr 15, 2020, 10:23 AM ISTUpdated : Apr 15, 2020, 12:45 PM IST
ಲಾಕ್‌ಡೌನ್, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ: ಏನಿದೆ ಏನಿಲ್ಲ?

ಸಾರಾಂಶ

ಕೇಂದ್ರ ಸರ್ಕಾರದಿಂದ ಲಾಕ್‌ಡೌನ್ ವಿಸ್ರರಣೆ| ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ| ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ನವದೆಹಲಿ(ಏ.15): ಕೇಂದ್ರ ಸರ್ಕಾರದಿಂದ ಲಾಕ್‌ಡೌನ್ ಮೇ 3ವರೆಗೆ ವಿಸ್ತರಿಸಲಾಗಿದ್ದು, ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಮಾರ್ಗಸೂಚಿ ಈ ಕೆಳಕಂಡತಿದೆ.

ಏನೆಲ್ಲಾ ಇರಲಿದೆ?

* ಎಲ್ಲಾ ಆಸ್ಪತ್ರೆಗಳು ತೆರೆದಿರಲಿವೆ. ಎಲ್ಲಾ ರೀತಿಯ ರೋಗಿಗಳಿಗೂ ಸೂಕ್ತ ಚಿಕಿತ್ಸೆ. ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ರೀತಿಯ ಲ್ಯಾಬ್‌, ಮೆಡಿಕಲ್ ಶಾಪ್ ಸೇರಿದಂತೆ ಎಲ್ಲವೂ ತೆರೆದಿರಲಿವೆ.

* ರೈತರು ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಂಪೂರ್ಣವಾಗಿ ತೊಡಗಲು ಅನುವು. ರೈತರಿಗೆ ಪೂರಕವಾಗಿ ಗೊಬ್ಬರು, ಬೀಜ ಮತ್ತು ಕೃಷಿ ಸಲಕರಣೆಗಳನ್ನು ಮಾರಾಟ ಮಾಡುವ ಕಂಪೆನಿಗಳು ಕಾರ್ಯ ಆರಂಭಿಸಲು ಅವಕಾಶ.

* ಆಹಾರದ ಸರಪಳಿ ತುಂಡರಿಯದೆ ನೋಡಿಕೊಳ್ಳುವ ಸಲುವಾಗಿ ರೈತರಿಂದ ಪದಾರ್ಥಗಳನ್ನು ಕೊಂಡು ಮಾರುಕಟ್ಟೆಗೆ ಸಾಗಿಸುವ ಎಲ್ಲಾ ಮಾದರಿಯ ಸಂಪರ್ಕಕ್ಕೆ ಅವಕಾಶ.

* ಗ್ರಾಮೀಣ ಭಾಗದಲ್ಲಿ ಎಂಎನ್‌ಆರ್‌ಇಜಿಎ ಕೆಲಸಗಳಿಗೆ ಅನುಮತಿ. ಈ ಮೂಲಕ ಕೃಷಿ ಕೂಲಿಗಳಿಗೆ ಕೆಲಸ ಕೊಡಬಹುದು.
* ಅಡಿಗೆ ಅನಿಲ ಪೂರೈಕೆ, ನೀರು ಸರಬರಾಜು ಹಾಗೂ ಶುಚಿ ಕೆಲಸದಲ್ಲಿ ತೊಡಗಿರುವವರಿಗೆ ಯಾವುದೇ ತೊಂದರೆ ಇಲ್ಲ.

* ಗೂಡ್ಸ್‌ ರೈಲು ಎಂದಿನಂತೆ ಕಾರ್ಯನಿರ್ವಹಣೆ.

* ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಕಾರ್ಯ ನಿರ್ವಿಸಲು ಅವಕಾಶ.

* IT ಉದ್ಯಮ ಶೇ.50 ರಷ್ಟು ಉದ್ಯೋಗಿಗಳ ಜೊತೆಗೆ ಕಚೇರಿಯಲ್ಲಿ ಎಂದಿನಂತೆ ಕಾರ್ಯಾರಂಭ ಮಾಡಲು ಅನುಮತಿ.

* ಗ್ರಾಮ ಪಂಚಾಯತಿ ಮಟ್ಟದ ಸರ್ಕಾರಿ ಕಚೇರಿಗಳು ತೆರೆದಿರುತ್ತವೆ.

* ವಿಶೇಷ ಆರ್ಥಿಕ ವಲಯದ ಅಡಿಯಲ್ಲಿ ಬರುವ ಎಲ್ಲಾ ಕೈಗಾರಿಕೆಗಳು ಹಾಗೂ ಆಹಾರ ಸಂರಕ್ಷಣಾ ಘಟಕಗಳು ಎಂದಿನಂತೆ ಕಾರ್ಯಾರಂಭ ಮಾಡಬಹುದು. ಆದರೆ, ಉದ್ಯೋಗಿಗಳನ್ನು ಸಾಮಾಜಿಕ ಅಂತರದ ನಿಮಯಮಗಳಿಗೆ ಅನುಸಾರವಾಗಿ ಕೈಗಾರಿಕೆಗಳಿಗೆ ಕರೆತರಬೇಕು. ಉತ್ತಮ ಸಾರಿಗೆ ವ್ಯವಸ್ಥೆ ಮಾಡಬೇಕು.

"

3 ಲಕ್ಷ ಜನರ ಮೇಲೆ ಮೋದಿ ಕಣ್ಣು, 2 ನೇ ಹಂತದ ಲಾಕ್‌ಡೌನ್‌ ಹಿಂದಿನ ರಹಸ್ಯ!

ಏನಿರಲ್ಲ?  

* ಲಾಕ್‌ಡೌನ್‌ ನಿಂದಾಗಿ ರಾಷ್ಟ್ರೀಯ-ಅಂತಾರಾಷ್ಟ್ರೀಯ ವಿಮಾನಗಳು, ಎಲ್ಲಾ ರೀತಿಯ ರೈಲು ಸೇವೆಗಳು ಮತ್ತು ಬಸ್‌ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು ಮೇ 03ರ ವರೆಗೆ ಇದು ಮುಂದುವರೆಯುತ್ತದೆ.

* ಎಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸ್ಥಗಿತ.

* ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವ ಪ್ರದೇಶಗಳಿಗೆ ಹೊರಗಿನಿಂದ ಯಾರ ಪ್ರವೇಶಕ್ಕೂ ಅನುಮತಿ ಇಲ್ಲ. ಈ ಪ್ರದೇಶದಲ್ಲಿ ಕಾನೂನು ಕಠಿಣವಾಗಿರಲಿದ್ದು, ಮಾಲಿನ್ಯಕ್ಕೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ.#ಎಲ್ಲಾ ರೀತಿಯ ಸಾರ್ವಜನಿಕ ಸಮಾರಭಗಳಿಗೂ ತಡೆ.

* ಧಾರ್ಮಿಕ ಕ್ಷೇತ್ರಗಳ ಸ್ಥಗಿತ ಮುಂದುವರೆಯಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ