
ನವದೆಹಲಿ(ಮಾ.29) ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಗೆ ಒಂದರ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಬಳಿಕ ಆಪ್ ಜಂಗಾಬಲವೇ ಉಡುಗಿ ಹೋಗಿದೆ. ಇದರ ನಡುವೆ ಜೈಲಿನಲ್ಲಿ ಸರಿಸುಮಾರು 2 ವರ್ಷಗಳಿಂದ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ ಸತ್ಯೇಂದ್ರ ಜೈನ್, ತಿಹಾರ್ ಜೈಲಿನಿಂದ ಕೋಟಿ ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾರೆ ಅನ್ನೋ ಆರೋಪದ ಕುರಿತು ತನಿಖೆಯನ್ನು ಸಿಬಿಐಗೆ ನೀಡಲಾಗಿದೆ.
ಸತ್ಯೇಂದ್ರ ಜೈನ್ ಹಾಗೂ ಮಾಜಿ ಜೈಲಧಿಕಾರಿ ರಾಜ್ ಕುಮಾರ್ ಸೇರಿದಂತೆ ಹಲವರು ವಂಚಕ ಸುಕೇಶ್ ಚಂದ್ರಶೇಖರ್ ಸೇರಿದಂತೆ ಹಲವು ಕೈದಿಗಳೀಗೆ ಕಾರಾಗೃಹದಲ್ಲಿ ಸುಖ-ವೈಭೋಗ ಕಲ್ಪಿಸಲು ಸುಲಿಗೆ ಮಾಡಿದ್ದಾರೆ ಅನ್ನೋ ಆರೋಪ ಗಂಭೀರವಾಗಿದೆ. ಈ ಕುರಿತು ಹಲವು ದಾಖಲೆಗಳು ಲಭ್ಯವಾಗಿದೆ. ಇತ್ತ ವಂಚಕ ಸುಕೇಶ್ ಕೂಡ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ವಂಚಕ ಸುಕೇಶ್ ಚಂದ್ರಶೇಖರ್ ಸೇರಿದಂತೆ ಇತರ ಪ್ರಮುಖ ಕೈದಿಗಳಿಗೆ ಜೈಲಿನಲ್ಲಿ ಸುಖ ವೈಭೋಗ ಕಲ್ಪಿಸಲು ಸತ್ಯೇಂದ್ರ ಜೈನ್ ಕಂತುಗಳಲ್ಲಿ 10 ಕೋಟಿ ರೂಪಾಯಿ ಪಡೆದಿದ್ದಾರೆ ಅನ್ನೋ ಆರೋಪಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿತ್ತು.
ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ, ಎಪ್ರಿಲ್ 1ವರೆಗೆ ಇಡಿ ಕಸ್ಟಡಿ ವಿಸ್ತರಿಸಿದ ಕೋರ್ಟ್!
ಈ ಸಾಕ್ಷ್ಯಗಳ ಆಧಾರದಲ್ಲಿ ಸತ್ಯೇಂದ್ರ ಜೈನ್ ವಿರುದ್ಧ ಹೆಚ್ಚಿನ ತನಿಖೆ ನಡೆಸಲು ಸಿಬಿಐ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗ ಅನುಮತಿ ನೀಡುವಂತೆ ಮನವಿ ಮಾಡಿತ್ತು. ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಈ ವರ್ಷದ ಆರಂಭದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಈ ಅನುಮತಿ ಬಳಿಕ ಕೇಂದ್ರ ಗೃಹ ಸಚಿವಾಲಯ ಇದೀಗ ಸಿಬಿಐ ತನಿಖೆಗೆ ಆದೇಶ ಹೊರಡಿಸಿದೆ.
ವಂಚಕ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಇಷ್ಟೇ ಅಲ್ಲ ಇದೇ ಜೈಲಿನಿಂದ ಕೆಲ ಉದ್ಯಮಿಗಳಿಂದ ಕೋಟಿ ಕೋಟಿ ರೂಪಾಯಿ ಹಣ ವಸೂಲಿ ಮಾಡಿದ್ದ. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆಪ್ ನಾಯಕ ಸತ್ಯೇಂದ್ರ ಜೈನ್ ಹೆಸರು ಕೂಡ ಕೇಳಿಬಂದಿತ್ತು. ಇದಕ್ಕೆ ಪೂರಕ ದಾಖೆಗಳು ಲಭ್ಯವಾಗಿತ್ತು.
ದೆಹಲಿ ಸಿಎಂ ಕೇಜ್ರಿವಾಲ್ ಸೆರೆಗೆ ಆಕ್ಷೇಪಿಸಿದ ಅಮೆರಿಕಕ್ಕೆ ಭಾರತ ತರಾಟೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ