
ಮುಂಬೈ(ಜು.22): ಆರಂಭಿಕ ಹಂತದಲ್ಲಿ ಕೊರೋನಾ ಸೋಂಕಿತರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿರುವ ಬ್ರಿಟನ್‌ನ ಆಕ್ಸ್‌ಫರ್ಡ್ ವಿವಿ ಮತ್ತು ಅಸ್ಟ್ರಾಜೆನಿಕಾ ಅಭಿವೃದ್ಧಿಪಡಿಸಿದ ಲಸಿಕೆಯು ಆಗಸ್ಟ್ ಅಂತ್ಯದಲ್ಲಿ ಭಾರತದಲ್ಲೂ ಲಭ್ಯವಾಗಲಿದೆ.
ಪರೀಕ್ಷಾರ್ಥವಾಗಿ 5000 ಜನರ ಮೇಲೆ ಈ ಲಸಿಕೆಯ ಪ್ರಯೋಗ ಆರಂಭಿಸಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ವರ್ಷದ ಜೂನ್‌ನಲ್ಲಿ ಈ ಲಸಿಕೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ಭಾರತೀಯ ಸೆರುಂ ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ ಸೆರುಂ ಸಂಸ್ಥೆ ಮುಖ್ಯ ಕಾರ್ಯನಿರ್ವಾಹಕ ಅದರ್ ಪೂನಾವಾಲಾ, ‘ಮುಂದಿನ ತಿಂಗಳ ಅಂತ್ಯದಲ್ಲಿ ಕೊರೋನಾ ಲಸಿಕೆ ಪ್ರಯೋಗಕ್ಕೆ ಅಗತ್ಯವಿರುವ ಅನುಮತಿ ಪಡೆಯುತ್ತೇವೆ. ಮುಂದಿನ 1-2 ವಾರಗಳಲ್ಲಿ ಈ ಸಂಬಂಧ ಭಾರತೀಯ ಔಷಧಗಳ ನಿಯಂತ್ರಣ ಕಚೇರಿ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.
ಬಳಿಕ ದೇಶದಲ್ಲೇ ಅತಿಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ ಪುಣೆ ಮತ್ತು ಮುಂಬೈನಲ್ಲಿ 4 ಸಾವಿರದಿಂದ 5 ಸಾವಿರ ಮಂದಿಗೆ ಈ ಲಸಿಕೆ ಹಾಕುತ್ತೇವೆ. ಆ ಬಳಿಕ ಅವರಲ್ಲಿ ಕೊರೋನಾ ನಿಯಂತ್ರಣ ಸಾಮರ್ಥ್ಯ ವೃದ್ಧಿಯಾಗಲಿದೆಯೇ ಎಂಬುದರ ಬಗ್ಗೆ ಅಧ್ಯಯನ ನಡೆಸಿ, ಲಸಿಕೆಯು ರೋಗಿಗಳ ಮೇಲೆ ಪ್ರಯೋಗಿಸಲು ಯೋಗ್ಯವಾಗಿದೆಯೇ ಎಂಬುದನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ