ಎಷ್ಟುರನ್‌ ಗಳಿಸಿ ನಿಮ್ಮ ಮಗ ಬಿಸಿಸಿಐನಲ್ಲಿದ್ದಾರೆ : ಶಾಗೆ ಸ್ಟಾಲಿನ್‌ ಪುತ್ರ ಟಾಂಗ್‌

Published : Jul 31, 2023, 09:48 AM IST
 ಎಷ್ಟುರನ್‌ ಗಳಿಸಿ ನಿಮ್ಮ ಮಗ ಬಿಸಿಸಿಐನಲ್ಲಿದ್ದಾರೆ : ಶಾಗೆ ಸ್ಟಾಲಿನ್‌ ಪುತ್ರ ಟಾಂಗ್‌

ಸಾರಾಂಶ

ಡಿಎಂಕೆಯನ್ನು ಕುಟುಂಬ ರಾಜಕಾರಣ ಪಕ್ಷ ಎಂದು ಟೀಕಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ತಿರುಗೇಟು ನೀಡಿರುವ ತಮಿಳುನಾಡು ಸಚಿವ ಹಾಗೂ ಸಿಎಂ ಎಂ.ಕೆ. ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌, ‘ನಿಮ್ಮ ಮಗ ಎಷ್ಟುರನ್‌ ಗಳಿಸಿದ್ದಾರೆ? ಹೇಗೆ ಅವರು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕಾರ್ಯದರ್ಶಿಯಾಗಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.

ಚೆನ್ನೈ: ಡಿಎಂಕೆಯನ್ನು ಕುಟುಂಬ ರಾಜಕಾರಣ ಪಕ್ಷ ಎಂದು ಟೀಕಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ತಿರುಗೇಟು ನೀಡಿರುವ ತಮಿಳುನಾಡು ಸಚಿವ ಹಾಗೂ ಸಿಎಂ ಎಂ.ಕೆ. ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌, ‘ನಿಮ್ಮ ಮಗ ಎಷ್ಟುರನ್‌ ಗಳಿಸಿದ್ದಾರೆ? ಹೇಗೆ ಅವರು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕಾರ್ಯದರ್ಶಿಯಾಗಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ. ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ್ದ ಅಮಿತ್‌ ಶಾ ‘ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹಾಗೂ ಡಿಎಂಕೆ ಕುಟುಂಬ ರಾಜಕಾರಣ ಮಾಡುತ್ತಿದೆ’ ಎಂದು ಟೀಕಿಸಿದ್ದರು.

ಭಾನುವಾರ ಚೆನ್ನೈನಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್‌ ‘ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾದೆ, ಸಚಿವ ಸ್ಥಾನ ಪಡೆದಿದ್ದೇನೆ. ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಆದರೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದು ಹೇಗೆ? ಅವರು ಎಷ್ಟುಕ್ರಿಕೆಟ್‌ ಪಂದ್ಯಗಳನ್ನಾಡಿದ್ದಾರೆ ಮತ್ತು ಎಷ್ಟು ರನ್‌ ಗಳಿಸಿದ್ದಾರೆ ಎಂದು ನಾನು ಅವರನ್ನು ಕೇಳುತ್ತೇನೆ ಎಂದಿದ್ದಾರೆ.

ಗೆಳತಿ ಜತೆ CM ಸ್ಟಾಲಿನ್​ ಮೊಮ್ಮಗನ ಫೋಟೋ ವೈರಲ್​, ಬಿರುಗಾಳಿ ಎಬ್ಬಿಸಿದ ಉದಯನಿಧಿ ಮಗನ ಲವ್ವಿಡವ್ವಿ!

ರಾಜ್ಯಪಾಲ ರವಿ ರಾಜ್ಯದ ಶಾಂತಿಗೆ ಅಪಾಯಕಾರಿ: ರಾಷ್ಟ್ರಪತಿಗೆ ತಮಿಳುನಾಡು ಸಿಎಂ ಸ್ಟಾಲಿನ್‌ ಪತ್ರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ