
ಗಾಂಧೀನಗರ(ಮೇ.05): ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಿಶ್ವದ ಒಟ್ಟು ಪ್ರಕರಣಗಳಲ್ಲಿ ಶೇ.46ರಷ್ಟು ಭಾರತದಲ್ಲಿಯೇ ವರದಿಯಾಗುತ್ತಿದೆ. ಕೊರೋನಾ ಸಾವಿನ ಸಂಖ್ಯೆ ವಿಪರೀತವಾಗಿ ಹೆಚ್ಚಾಗುತ್ತಿದೆ.
ಆಕ್ಸಿಜನ್ ಇಲ್ಲ, ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ವ್ಯಾಕ್ಸೀನ್ ಇಲ್ಲ.. ಬಿಡಿ ಇಷ್ಟಾದರೂ ಜನರಿಗೆ ಬುದ್ಧಿ ಬಂದಿಲ್ಲ. ಹೌದು.. ಗುಜರಾತ್‌ನಲ್ಲಿ ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ನೂರಾರು ಮಹಿಳೆಯರು ಮೆರವಣಿಗೆ ಹೊರಟಿದ್ದಾರೆ. ಮಾಸ್ಕ್ ಇಲ್ಲ, ಸ್ಯಾನಿಟೈಸರ್ ಇಲ್ಲ, ಸಾಮಾಜಿಕ ಅಂತರವಂತೂ ದೂರದ ಮಾತು.
ಕೊರೋನಾ ರೂಲ್ಸ್ ಫಾಲೋ ಮಾಡಿದ ನವಜೋಡಿಗಾಗಿ ಪೊಲೀಸರ ಹುಡುಕಾಟ
COVID-19 ಮಧ್ಯೆ ನಿರ್ಬಂಧಗಳ ಹೊರತಾಗಿಯೂ, ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ಸನಂದ್ ಪ್ರದೇಶದ ನವಪುರ ಗ್ರಾಮದಲ್ಲಿ ನೂರಾರು ಮಹಿಳೆಯರು ಜಮಾಯಿಸಿ ಬಾಲಿಯದೇವ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಮಹಿಳೆಯರಲ್ಲಿ ಹೆಚ್ಚಿನವರು ಮಾಸ್ಕ್ ಧರಿಸದೆ ಇರುವುದರಿಂದ ಸಾಮಾಜಿಕ ದೂರವಿಡುವ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನು ಕಾಣಬಹುದು. ಘಟನೆ ಸಂಬಂಧ 23 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ