* 26 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ
* ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ನಡೆಯಿತು ಕುಕೃತ್ಯ
* ಅತ್ಯಾಚಾರಗೈದು ಪರಾರಿಯಾದ ದುಷ್ಕರ್ಮಿಗಳು
ಜೈಪುರ(ಮಾ.19): 26 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಇಬ್ಬರು ದರೋಡೆಕೋರರು ಕಂಟ್ರಿಮೇಡ್ ಪಿಸ್ತೂಲ್ ತೋರಿಸಿ ಆಕೆಯ ಪತಿ ಮತ್ತು ಮಕ್ಕಳ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಮಹಿಳೆ ತನ್ನ ಪತಿ ಮತ್ತು ಮಕ್ಕಳೊಂದಿಗೆ ಹೊಲದಲ್ಲಿ ಸಾಸಿವೆ ಕೊಯ್ಲು ಮುಗಿಸಿ ಮನೆಗೆ ಮರಳುತ್ತಿದ್ದರು. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಸಾಮೂಹಿಕ ಅತ್ಯಾಚಾರ, ಹಲ್ಲೆ ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಇದುವರೆಗೂ ಯಾವುದೇ ಆರೋಪಿ ಪೊಲೀಸರಿಗೆ ಸಿಕ್ಕಿಲ್ಲ.
ಈ ಘಟನೆ ಧೋಲ್‌ಪುರ ಜಿಲ್ಲೆಯ ಕಾಂಚನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ಹೊಲದಿಂದ ಸಾಸಿವೆ ಕಡಿಯಲು ಬರುತ್ತಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಅದೇ ವೇಳೆ ದಾರಿಯಲ್ಲಿ ಗ್ರಾಮದ ಕೆಲವರು ಅವರನ್ನು ಸುತ್ತುವರೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಆಕೆಯ ಕುಟುಂಬ ಅವರನ್ನು ಪ್ರತಿಭಟಿಸಿದೆ, ಆದರೆ ದುಷ್ಕರ್ಮಿಗಳು ಆಕೆಯ ಪತಿ ಮೇಲೆ ಹಲ್ಲೆ ನಡೆಸಿ ಕಂಟ್ರಿಮೇಡ್ ಪಿಸ್ತೂಲ್ ನಿಂದ ಹೊಡೆದು ಗಾಯಗೊಳಿಸಿದ್ದಾರೆ. ಅವನ ಮಕ್ಕಳು ಜೋರಾಗಿ ಕೂಗುತ್ತಲೇ ಇದ್ದರು. ಆದರೆ ಇದ್ಯಾವುದಕ್ಕೂ ಕರಗದ ದುಷ್ಕರ್ಮಿಗಳು ಕಂಟ್ರಿ ಮೇಡ್ ಪಿಸ್ತೂಲುಗಳ ಭಯ ತೋರಿಸಿ ಸರದಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಇದುವರೆಗೂ ಆರೋಪಿಗಳ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ. ಘಟನೆಯ ನಂತರ ಸಂತ್ರಸ್ತೆಯ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ತೆಗೆದುಕೊಳ್ಳಲಾಗಿದೆ. ಮತ್ತು ಈ ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸುತ್ತಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಸಿಂಗ್, ಪತಿಯೊಂದಿಗೆ ಠಾಣೆಗೆ ಆಗಮಿಸಿದ ಮಹಿಳೆ ಗ್ರಾಮದ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಬಳಿಕ ತನಿಖೆ ಆರಂಭಿಸಲಾಗಿದೆ. ಸದ್ಯ ಎಲ್ಲಾ ಆರೋಪಿಗಳು ಸ್ಥಳದಿಂದ ತಲೆಮರೆಸಿಕೊಂಡಿದ್ದಾರೆ. ಆದರೆ ಪೊಲೀಸರು ಶೀಘ್ರದಲ್ಲೇ ಅವರನ್ನು ಹಿಡಿಯುತ್ತಾರೆ ಎಂದಿದ್ದಾರೆ.