ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.
ಗುವಾಹಟಿ (ಮಾ.16): ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ. ಡೆರ್ಗಾಂವ್‌ನಲ್ಲಿ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾ, ‘ನಾವು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದೆವು. ಆಗ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರ ನನ್ನನ್ನು ಥಳಿಸಿ ಬಂಧಿಸಿತ್ತು.
ನಾನು ಕೂಡ ಅಸ್ಸಾಂನಲ್ಲಿ 7 ದಿನಗಳ ಕಾಲ ಜೈಲಿನ ಆಹಾರವನ್ನು ಸೇವಿಸಿದ್ದೆ. ಆಗ ಹಿತೇಶ್ವರ ಸೈಕಿಯಾ ಮುಖ್ಯಮಂತ್ರಿಯಾಗಿದ್ದರು’ ಎಂದು ಬಹಿರಂಗಪಡಿಸಿದರು. ‘ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ಶಾಂತಿಗೆ ಅವಕಾಶ ನೀಡಲಿಲ್ಲ. ಆದರೆ ಕಳೆದ 10 ವರ್ಷದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 10,000 ಕ್ಕೂ ಹೆಚ್ಚು ಯುವಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಿದ್ದಾರೆ’ ಎಂದರು.
ಆಸ್ಪತ್ರೆಯ ಶೇ.60ರಷ್ಟು ಹಾಸಿಗೆ ಬಡವರಿಗೆ ಶ್ಲಾಘನೀಯ: ಧಾರ್ಮಿಕ ಬೋಧನೆಗಳನ್ನು ಆಧುನಿಕ ಶಿಕ್ಷಣದೊಂದಿಗೆ ಸಂಯೋಜಿಸಲು ಕೆಲಸ ಮಾಡಿದ್ದ ವಿಶ್ವೇಶತೀರ್ಥ ಸ್ವಾಮೀಜಿ ಹೆಸರಲ್ಲಿ ನಿರ್ಮಾಣವಾದ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಶೇ.60ರಷ್ಟು ಹಾಸಿಗೆಗಳನ್ನು ಬಡವರಿಗೆ ಮೀಸಲಿಟ್ಟಿರುವುದು ಮಾದರಿಯ ಕಾರ್ಯ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಮಾರತಹಳ್ಳಿಯಲ್ಲಿ ಶ್ರೀಕೃಷ್ಣಸೇವಾಶ್ರಮ ಟ್ರಸ್ಟ್ 2 ಎಕರೆ ಭೂಮಿಯಲ್ಲಿ ₹60 ಕೋಟಿ ವೆಚ್ಚದಲ್ಲಿ 150 ಹಾಸಿಗೆಗಳ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಬಡ ಮತ್ತು ದೀನದಲಿತ ವರ್ಗಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ಆಧುನಿಕ ಅಸ್ಪತ್ರೆ ನಿರ್ಮಾಣವಾಗಿದೆ. ಶ್ರೀ ಕೃಷ್ಣ ವೈದ್ಯಕೀಯ ಕೇಂದ್ರ, ಶ್ರೀ ಕೃಷ್ಣ ನೇತ್ರಾಲಯ, ದಂತ ಕೇಂದ್ರ ಮತ್ತು ಶ್ರೀ ವಿಶ್ವಪ್ರಸನ್ನತೀರ್ಥ ಸ್ಮಾರಕ ಚಿಕಿತ್ಸಾಲಯವನ್ನು ಸಂಸ್ಥೆಯಿಂದ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.
ವಿಶ್ವಸಂಸ್ಥೆಯಲ್ಲಿ ಮತ್ತೆ ಪಾಕಿಸ್ತಾನ ಕಾಶ್ಮೀರ ಕ್ಯಾತೆ: ಭಾರತ ಕಿಡಿ
ಪೇಜಾವರ ಮಠವು ಕರ್ನಾಟಕ ಮಾತ್ರವಲ್ಲ, ಭಾರತದ ಪ್ರಮುಖ ಮಠವಾಗಿದ್ದು, ಬೆಳಕಿನ ದೀಪವಾಗಿ ಕಾರ್ಯನಿರ್ವಹಿಸುತ್ತಿದೆ. ವಿಶ್ವೇಶತೀರ್ಥರ ನಾಯಕತ್ವದಲ್ಲಿ ಮಠವು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವಲ್ಲಿ, ಬಲವಂತದ ಮತಾಂತರವನ್ನು ತಡೆಗಟ್ಟುವಲ್ಲಿ, ರಾಮ ಮಂದಿರ ಚಳವಳಿಯನ್ನು ಬೆಂಬಲಿಸುತ್ತ ಸನಾತನ ಧರ್ಮದ ರಕ್ಷಣೆಗೆ ನಿಂತಿದೆ. ಸ್ವಾಮೀಜಿ ದಕ್ಷಿಣ ಭಾರತದಲ್ಲಿ ಹಿಂದೂ ಸಮಾಜವನ್ನು ಜಾತಿಗಳಾಗಿ ವಿಭಜಿಸುವುದನ್ನು ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.