
ಮುಂಬೈ(ಜು.26): ಆಯೋಧ್ಯೆಗೆ ತೆರಳಿ ರಾಮ ಜನ್ಮ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ. ಬಳಿಕ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಹಿಂದೆ ಆಯೋಧ್ಯೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದೇನೆ. ನಾನು ಮುಖ್ಯಮಂತ್ರಿ ಆಗುವ ಮೊದಲು ಆಯೋಧ್ಯೆಗೆ ತೆರಳಿದಾಗ ಅದ್ಧೂರಿ ಸ್ವಾಗತ ಕೋರಿದ್ದಾರೆ. ಗೌರವ ನೀಡಿದ್ದಾರೆ. ಈಗ ನಾನು ಮುಖ್ಯಮಂತ್ರಿಯಾಗಿ ಆಯೋಧ್ಯೆಗೆ ತೆರಳಿ ಪ್ರಾರ್ಥನೆ ಮಾಡುತ್ತೇನೆ. ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುುತ್ತೇನೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ರಾಮ ಮಂದಿರ ಶಿಲಾನ್ಯಾಸಕ್ಕೆ ಕಾವೇರಿ ತೀರ್ಥ, ಮಣ್ಣು ರವಾನೆ ..!..
ಆಗಸ್ಟ್ 5 ರಂದು ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆಗೆ ತೆರಳಿ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 2019ರ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿತ್ತು. ಈ ವೇಳೆ ರಾಮ ಜನ್ನ ಭೂಮಿಯಲ್ಲಿ ಮಂದಿ ನಿರ್ಮಾಣಕ್ಕೆ ಸಮಿತಿ ರಚಿಸಿ ಭೂಮಿಯನ್ನು ಹಸ್ತಾಂತರ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಫೆಬ್ರವರಿ 5 ರಂದು ರಾಮ ಮಂದಿರ ನಿರ್ಮಾಣ ಸಮಿತಿಯನ್ನು ಕೇಂದ್ರ ಸರ್ಕಾರ ಘೋಷಿಸಿತು.
ಮೋದಿಯಿಂದಲೇ ಆ.5ಕ್ಕೆ ಮಂದಿರಕ್ಕೆ ಭೂಮಿಪೂಜೆ ಶುಭಾರಂಭ!
ರಾಮ ಮಂದಿರ ಭೂಮಿ ಪೂಜೆ ಪಾಲ್ಗೊಳ್ಳುವ ಉದ್ಧವ್ ಠಾಕ್ರೆ, ತನ್ನ ಸರ್ಕಾರವನ್ನು ಬಿಜೆಗೆ ಅಲುಗಾಡಿಸಲು ಸಾಧ್ಯವಿಲ್ಲ. ತಾಖತ್ತಿದ್ದರೆ ಮುಟ್ಟಿ ನೋಡಲಿ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ