* ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ
* ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
* ಮಾಹಿತಿ ಖಚಿತಪಡಿಸಿದ ಭಾರತೀಯ ವಾಯುಸೇನೆ
ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಡಿದ್ದು, ಈ ದುರಂತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿರುವ ಮಾಹಿತಿಯನ್ನು ಭಾರತೀಯ ವಾಯುಸೇನಾ ಪಡೆ ದೃಢಪಡಿಸಿದೆ. ಹೌದು ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಆದರೆ ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುವಾಗ, ಮಧ್ಯಾಹ್ನ 12.20ಕ್ಕೆ ಪತನಗೊಂಡಿದೆ. ಲ್ಯಾಂಡಿಂಗ್ ಸ್ಥಳದಿಂದ ಕೇವಲ 10 ಕಿಮೀ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಹದಿಮೂರು ಮಂದಿ ಸಾವನ್ನಪ್ಪಿದ್ದು, ಮೃತರ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿದೆ.
With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.
— Indian Air Force (@IAF_MCC)2015ರಲ್ಲಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ ಬಿಪಿನ್ ರಾವತ್
2015ರ ಫೆಬ್ರವರಿಯಲ್ಲೂ ಕೂಡ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಸೇರಿದಂತೆ ಮೂವರು ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಚೀತಾ ಹೆಲಿಕಾಪ್ಟರ್ (Cheetah helicopter) ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ರಂಗಪಹಾರ್ ಹೆಲಿಪ್ಯಾಡ್ (Rangapahar helipad) ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಟೇಕಾಫ್ ಅದ ಕೆಲವೇ ಸೆಕೆಂಡ್‌ಗಳಲ್ಲಿ ನೆಲದಿಂದ ಸುಮಾರು 20 ಅಡಿ ಎತ್ತರದಲ್ಲಿ ಎಂಜಿನ್ (Engine) ಸ್ಥಗಿತಗೊಂಡಿತ್ತು. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣ ಗಾಯಗಳಾಗಿದ್ದವು. ಈ ಅಪಘಾತದಲ್ಲಿ ಹೆಲಿಕಾಪ್ಟರ್ ತೀವ್ರ ಹಾನಿಗೊಳಗಾಗಿತ್ತು.
ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಸೇನಾ ಅಧಿಕಾರಿ ಇದ್ದರು ಆದರೆ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಕೊಹಿಮಾದ ರಕ್ಷಣಾ ಪಿಆರ್‌ಒ ಲೆಫ್ಟಿನೆಂಟ್ ಕರ್ನಲ್ ಎಮ್ರಾನ್ ಮುಸಾವಿ (Emron Musavi) ತಿಳಿಸಿದ್ದರು. ಈ ಹೆಲಿಕಾಪ್ಟರ್ ಕ್ರ್ಯಾಶ್‌ನಲ್ಲಿ ಪವಾಡ ಸದೃಶವಾಗಿ ಬಿಪಿನ್ ರಾವತ್ ಪಾರಾಗಿದ್ದರು.
ಎಂಐ-17 ಹೆಲಿಕಾಪ್ಟರ್ ಅನ್ನು ವಿವಿಐಪಿ ಚಲನೆಯಲ್ಲಿ ಬಳಸಲಾಗುತ್ತದೆ
ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.
ಹೆಲಿಕಾಪ್ಟರ್‌ನಲ್ಲಿ ಯಾರೆಲ್ಲಾ ಇದ್ದರು?
ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್. ಎ. ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್. ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ, ಹವಾಲ್ದಾರ್ ಸತ್ಪಾಲ್.
ಬಿಪಿನ್ ರಾವತ್ ಬಗ್ಗೆ ನಿಮಗೆ ತಿಳಿದಿರಲೇಬೇಕಾದ ವಿಚಾರಗಳು: