
ನವದೆಹಲಿ (ಮೇ 8, 2023): ನವದೆಹಲಿ (ಮೇ 8, 2023): ರಾಜಸ್ಥಾನದಲ್ಲಿ ಮಿಗ್ ವಿಮಾನ ಪತನಗೊಂಡಿದ್ದು, ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಅಲ್ಲದೆ, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದೆ. ಇನ್ನು, ಪೈಲಟ್ ಸುರಕ್ಷಿತವಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ವಾಯುಪಡೆಗೆ ಸೇರಿದ ಮಿಗ್ 21 ಫೈಟರ್ ಜೆಟ್ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಪತನಗೊಂಡಿದ್ದು, ಈ ವೇಳೆ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್, ವಿಮಾನದ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ವಿಮಾನವು ಸೂರತ್‌ಗಢ ಏರ್ ಫೋರ್ಸ್ ಸ್ಟೇಷನ್‌ನಿಂದ ಟೇಕಾಫ್ ಆಗಿದ್ದು, ಟೇಕ್ ಆಫ್ ಆದ ಕೂಡಲೇ ಪೈಲಟ್ ತಾಂತ್ರಿಕ ದೋಷವನ್ನು ವರದಿ ಮಾಡಿದ್ದಾರೆ. ವರದಿಯ ಪ್ರಕಾರ, ಮಿಗ್ -21 ಬಹ್ಲೋಲ್‌ನಲ್ಲಿರುವ ಮನೆಗೆ ಅಪ್ಪಳಿಸಿದ ನಂತರ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಮಹಿಳೆಯರ ಮೇಲೆ ಅವಶೇಷಗಳು ಬಿದ್ದ ಕಾರಣ ಸಾವಿಗೀಡಾಗಿದ್ದು, ಒಟ್ಟು ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ: ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಸೇನೆಯಿಂದ ರಕ್ಷಣಾ ಕಾರ್ಯ
“ಐಎಎಫ್‌ನ ಮಿಗ್ -21 ವಿಮಾನವು ಇಂದು ಬೆಳಗ್ಗೆ ವಾಡಿಕೆಯ ತರಬೇತಿಯ ಸಮಯದಲ್ಲಿ ಸೂರತ್‌ಗಢದ ಬಳಿ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಹೊರಗೆ ಬಂದಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ರಚಿಸಲಾಗಿದೆ" ಎಂದು ಭಾರತೀಯ ವಾಯುಪಡೆ ಹೇಳಿಕೆಯಲ್ಲಿ ತಿಳಿಸಿದೆ.
ಇಬ್ಬರು ಪೈಲಟ್‌ಗಳು ಮತ್ತು ತಂತ್ರಜ್ಞರಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪತನಗೊಂಡ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಆ ವೇಳೆ ಮೂವರು ಗಾಯಗೊಂಡಿದ್ದು, ಭಾರತೀಯ ಸೇನೆಯ ಪ್ರಕಾರ ಗಾಯಗೊಂಡ ಎಲ್ಲಾ ಮೂವರು ಸಿಬ್ಬಂದಿಯನ್ನು ಉಧಂಪುರದ ಕಮಾಂಡ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ನಾಪತ್ತೆ..!
ಕಳೆದ ವರ್ಷ, ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ 2 ಸೀಟ್‌ನ ಮಿಗ್ -21 ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದರು. ರಾಜಸ್ಥಾನದ ಉತರ್ಲೈ ವಾಯುನೆಲೆಯಿಂದ ತರಬೇತಿಗಾಗಿ ವಿಮಾನವು ಹಾರಾಟ ನಡೆಸುತ್ತಿದ್ದ ವೇಳೆ ಅವಘಡ ನಡೆದಿತ್ತು. ರಾತ್ರಿ 9:10 ರ ಸುಮಾರಿಗೆ ಬಾರ್ಮರ್ ಬಳಿ ವಿಮಾನ ಅಪಘಾತಕ್ಕೀಡಾಗಿತ್ತು. ಇಬ್ಬರೂ ಪೈಲಟ್‌ಗಳು ಗಾಯಗೊಂಡ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಇದನ್ನೂ ಓದಿ: ಭಾರತದ ವೈಮಾನಿಕ, ರಕ್ಷಣಾ ಉದ್ಯಮಕ್ಕೆ ಕರ್ನಾಟಕವೇ ತವರು ಮನೆ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ