
ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗೆ ರವಾನಿಸಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಮನೋರತ್ ಸಿಂಗ್ ವಿರುದ್ಧ ದೆಹಲಿ ಪೊಲೀಸ್ ವಿಶೇಷ ಘಟಕ ಚಾರ್ಜ್‌ಶೀಟ್ ಸಲ್ಲಿಸಿದೆ. ಆದ್ರೂ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರದ ಅನುಮೋದನೆ ಇನ್ನೂ ಸಿಕ್ಕಿಲ್ಲದ ಕಾರಣ ಪಟಿಯಾಲ ಹೌಸ್ ನ್ಯಾಯಾಲವು ಚಾರ್ಜ್‌ಶೀಟ್ ಅನ್ನು ಸ್ವೀಕರಿಸಿಲ್ಲ. ಅನುಮೋದನೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ತಿಂಗಳು ಅಂದರೆ ಡಿಸೆಂಬರ್ 5 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಅಲ್ಲದೆ ಈ ಪ್ರಕರಣದಲ್ಲಿ ಡಿಸಿಪಿ ವೈಯಕ್ತಿಕವಾಗಿ ವಿಚಾರಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.
ಪಟಿಯಾಲ ಹೌಸ್ ನ್ಯಾಯಾಲಯದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮೃದುಲ್ ಗುಪ್ತಾ ಹೇಳುವ ಪ್ರಕಾರ, To initiate proceedings against the accused under Section 152 of the Code of Criminal Procedure and the Official Secrets Act ಅಡಿ ಅಗತ್ಯವಾದ ಅನುಮೋದನೆ ಇನ್ನೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಅನುಮೋದನೆ ಪ್ರಕ್ರಿಯೆ ನಡೆಯುತ್ತಿದೆ ಎಂದು ದೆಹಲಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಕರಣದಲ್ಲಿನ ಗಮನಾರ್ಹ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯವು, ಅನುಮೋದನೆ ಪ್ರಕ್ರಿಯೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಅದನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಪೊಲೀಸ್ ಆಯುಕ್ತರಿಗೆ (ಡಿಸಿಪಿ) ನಿರ್ದೇಶಿಸಿದೆ. ಮುಂದಿನ ವಿಚಾರಣೆಯಲ್ಲಿ ಡಿಸಿಪಿ ವರದಿಯನ್ನು ಸಲ್ಲಿಸಬೇಕಾಗುತ್ತದೆ. ಡಿಸೆಂಬರ್ 5 ರಂದು ಆರೋಪಿ ವಿಂಗ್ ಕಮಾಂಡರ್ ಹಾಜರಾಗುವಂತೆ ಪ್ರೊಡಕ್ಷನ್ ವಾರಂಟ್ ಹೊರಡಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ.
ವಿಂಗ್ ಕಮಾಂಡರ್ ಪಾಕಿಸ್ತಾನದ ಗುಪ್ತಚರ ಏಜೆಂಟ್ ಜೊತೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದಾಖಲೆಗಳಲ್ಲಿ ಯುದ್ಧ ತಂತ್ರದ ವಿವರಗಳು, ಮಿಲಿಟರಿ ನೆಲೆಗಳ ಸ್ಥಳ, ಸೈನಿಕರ ಚಲನವಲನಗಳು, ಪ್ರಮುಖ ಮಿಲಿಟರಿ ಸ್ಥಾಪನೆಗಳ ನಿಖರವಾದ ನಿರ್ದೇಶಾಂಕಗಳು ಸೇರಿವೆ ಎಂದು ವರದಿಯಾಗಿದೆ.
ತನಿಖೆಯ ಬಗ್ಗೆ ತಿಳಿದಿರುವ ಮೂಲಗಳ ಪ್ರಕಾರ, ಆರೋಪಿ ಲೇಹ್‌ನಲ್ಲಿ ಫೈಟರ್ ಜೆಟ್‌ಗಳ ನಿಯೋಜನೆ ಮತ್ತು ರಾಜಸ್ಥಾನದ ಸೂರತ್‌ಗಢದಲ್ಲಿರುವ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ನಡೆಸಿದ ಮಿಲಿಟರಿ ವ್ಯಾಯಾಮಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಈ ಮಾಹಿತಿಯನ್ನು ಶತ್ರು ದೇಶ ಪಡೆದಿದ್ದರೆ, ಮಿಲಿಟರಿ ಕಾರ್ಯಾಚರಣೆಗಳು ಮತ್ತು ಭದ್ರತೆಗೆ ಅಪಾಯಕಾರಿಯಾಗಿ ಪರಿಣಮಿಸಬಹುದು.
ಈ ಪ್ರಕರಣದಲ್ಲಿ ಅತ್ಯಂತ ಗಂಭೀರವಾದ ಆರೋಪವೆಂದರೆ ಆರೋಪಿ ರಹಸ್ಯ ಡ್ರೋನ್ ಘಟಕಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್‌ಗೆ ರವಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಚಾರ್ಜ್‌ಶೀಟ್‌ನ ಪ್ರಕಾರ, ಇದರಲ್ಲಿ ಘಟಕದಲ್ಲಿ ನಿಯೋಜಿಸಲಾದ ಸಿಬ್ಬಂದಿಗಳ ಸಂಖ್ಯೆ, ಅದರ ಸಾಂಸ್ಥಿಕ ರಚನೆ, ಡ್ರೋನ್ ಪರೀಕ್ಷೆ, ಡ್ರೋನ್ ಹಾರಾಟದ ಸಾಮರ್ಥ್ಯಗಳು ಮತ್ತು ಶಸ್ತ್ರಾಸ್ತ್ರ ಗುರಿ ತಂತ್ರಗಳಿಗೆ ಸಂಬಂಧಿಸಿದ ಮಾಹಿತಿ ಸೇರಿವೆ ಎನ್ನಲಾಗಿದೆ.
ತನಿಖಾ ಸಂಸ್ಥೆಗಳು ಅಂತಹ ಮಾಹಿತಿಯು ಭಾರತದ ಪ್ರಮುಖ ಮಿಲಿಟರಿ ಸ್ವತ್ತುಗಳ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಮತ್ತು ಮಿಲಿಟರಿಯ ಸನ್ನದ್ಧತೆ ಮತ್ತು ಕಾರ್ಯಾಚರಣೆಗಳಲ್ಲಿನ ದೌರ್ಬಲ್ಯಗಳನ್ನು ಬಹಿರಂಗಪಡಿಸಬಹುದು ಎಂದು ಆರೋಪಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ