ಐಎಎಸ್‌ ತಿವಾರಿ ಕೇಸ್‌ ಸಿಬಿಐ ತನಿಖೆ ಸಮಾಪ್ತಿಗೆ ನಕಾರ

Kannadaprabha News   | Asianet News
Published : Aug 28, 2020, 08:53 AM IST
ಐಎಎಸ್‌ ತಿವಾರಿ ಕೇಸ್‌ ಸಿಬಿಐ ತನಿಖೆ ಸಮಾಪ್ತಿಗೆ ನಕಾರ

ಸಾರಾಂಶ

ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸಮಾಪ್ತಿಗೊಳಿಸುವ ಕುರಿತಂತೆ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಲಖನೌ (ಆ.28): ಕರ್ನಾಟಕ ಕೇಡರ್‌ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸಮಾಪ್ತಿಗೊಳಿಸುವ ಕುರಿತಂತೆ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ತನಿಖೆಯನ್ನು ಮುಂದುವರಿಸುವಂತೆ ಸೂಚಿಸಿದೆ. 

ಪ್ರಕರಣದ ತನಿಖೆಯನ್ನು ಸಿಬಿಐ ಕೊನೆಗೊಳಿಸುತ್ತಿರುವುದನ್ನು ಪ್ರತಿಭಟಿಸಿ ಸಹೋದರ ಮಾಯಾಂಕ್‌ ತಿವಾರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಮುಂದುವರಿಸುವಂತೆ ವಿಶೇಷ ನ್ಯಾಯಾಧೀಶ ಸುಬ್ರತ್‌ ಪಾಠಕ್‌ ಆದೇಶಿಸಿದ್ದು, ಸೆ.30ರ ಒಳಗಾಗಿ ವರದಿ ಸಲ್ಲಿಸುವಂತೆ ತನಿಖಾ ತಂಡಕ್ಕೆ ಸೂಚಿಸಿದ್ದಾರೆ. 

ಸುಶಾಂತ್ ಸಾವಿನ ತನಿಖೆಗೆ ಬಂದ IPS ಅಧಿಕಾರಿಯನ್ನು ವಾಪಸ್ ಕಳಿಸಿದ ಬಿಎಂಸಿ...

ಸಾವಿಗೀಡಾದ ಅಧಿಕಾರಿ ದೊಡ್ಡ ಹಗರಣವನ್ನು ಬಯಲಿಗೆ ಎಳೆಯಲು ಹೊರಟಿದ್ದರು ಎಂಬುದರ ಬಗ್ಗೆ ಆಗಲಿ, ಅವರಿಗೆ ಹಿರಿಯ ಅಧಿಕಾರಿಗಳು ಒತ್ತಡ ಹೇರಿದ ಅಥವಾ ಜೀವ ಬೆದರಿಕೆ ಇದ್ದ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣದ ಸಮಾಪ್ತಿಗೆ ಕೋರಿಕೊಂಡಿತ್ತು.

ಉತ್ತರ ಪ್ರದೇಶದ ಲಖನೌನ ಅತಿಥಿ ಗೃಹವೊಂದರಲ್ಲಿ ಉಳಿದುಕೊಂಡಿದ್ದ ಅನುರಾಗ್‌ ತಿವಾರಿ 2017 ಮೇ 17ರಂದು ಸಾವಿಗೀಡಾಗಿದ್ದರು. ಅತಿಥಿ ಗೃಹದ ಸಮೀಪವೇ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆ ಆಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ