
ಢಾಕಾ (ಮೇ.2): ಪಶ್ಚಿಮ ಬಂಗಾಳದಲ್ಲಿರುವ ಅಕ್ರಮ ವಲಸಿಗರನ್ನು ಹೊರಹಾಕುವುದಾಗಿ ಘೋಷಿಸಿರುವ ಬಿಜೆಪಿಯು ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳ ಅಂದಾಜು, ನೆರೆಯ ಬಾಂಗ್ಲಾದೇಶದ ತಲೆನೋವಿಗೆ ಕಾರಣವಾಗಿದೆ. ಈ ಬಗ್ಗೆ ಬಾಂಗ್ಲಾದ ಎನ್‌ಸಿಪಿ ಸಂಸದ ಅಖ್ತರ್ ಹೊಸೈನಿ ಆತಂಕ ವ್ಯಕ್ತಪಡಿಸಿದ್ದಾರೆ.
ಅಲ್ಲಿನ ಸಂಸತ್ತಿನಲ್ಲಿ ಮಾತನಾಡಿದ ಅವರು, ‘ಸದ್ಯ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿರುವಂತೆ ಬಿಜೆಪಿಗೆ ಅಧಿಕಾರ ಸಿಕ್ಕಿದರೆ ಅವರು ಬಾಂಗ್ಲನ್ನರನ್ನೆಲ್ಲ ಬಾಂಗ್ಲಾಗೆ ಓಡಿಸುತ್ತಾರೆ. ಮುಸಲ್ಮಾನರನ್ನವರು ಕಳಿಸುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿ ಇಲ್ಲ. ಪರಿಣಾಮ ವಲಸಿಗರ ಸಾಗರವೇ ಹರಿದುಬಂದು ಇಲ್ಲಿ ಬಿಕ್ಕಟ್ಟು ಸೃಷ್ಟಿಯಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.
ಹೊಸೈನಿಯವರ ಈ ಹೇಳಿಕೆಯಿಂದ, ‘ಮತಬ್ಯಾಂಕ್‌ಗಾಗಿ ಟಿಎಂಸಿ ನುಸುಳುಕೋರರನ್ನು ಬೆಂಬಲಿಸುತ್ತದೆ’ ಎಂಬ ಬಿಜೆಪಿಯ ಆರೋಪಕ್ಕೆ ಇನ್ನಷ್ಟು ಬಲ ಬಂದಿದ್ದು, ‘ಟಿಎಂಸಿಯ ಸಹಾಯಕರು ನಿಧಾನವಾಗಿ ಮುನ್ನೆಲೆಗೆ ಬರುತ್ತಿದ್ದಾರೆ’ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಚಾಟಿ ಬೀಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ಏರ್ಪಟ್ಟಿದ್ದು, ಎರಡೂ ಪಕ್ಷಗಳು ಬಿರುಸಿನ ಪ್ರಚಾರ ಮಾಡಿ ಮತದಾರರ ಮನ ಗೆಲ್ಲಲು ಯತ್ನಿಸಿದ್ದವು. ಎರಡು ಹಂತದಲ್ಲಿ ನಡೆದ ಚುನಾವಣೆಯಲ್ಲೂ ಈ ಹಣಾಹಣಿ ಕಂಡುಬಂದಿತ್ತು. ಮತದಾನೋತ್ತರ ಸಮೀಕ್ಷೆಗಳ ಪೈಕಿ 6 ಬಿಜೆಪಿ ಪರ ಭವಿಷ್ಯ ನುಡಿದರೆ, ಇನ್ನೆರಡು ಸಂಸ್ಥೆಗಳು ಮಮತಾ ಬ್ಯಾನರ್ಜಿ 4ನೇ ಬಾರಿ ಸಿಎಂ ಪಟ್ಟಕ್ಕೇರಬಹುದು ಎಂದಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ