COVID ಟೈಂನಲ್ಲಿ ಡಿಎಂಕೆ ಅಧಿಕಾರದಲ್ಲಿದ್ದಿದ್ರೆ ಸ್ಟಾಲಿನ್ ಸತ್ತೋಗಿರ್ತಿದ್ರು; ಪಳನಿಸ್ವಾಮಿ

Kannadaprabha News   | Kannada Prabha
Published : Apr 10, 2026, 09:37 AM IST
If DMK in power during COVID times Stalin would have died says Palaniswam

ಸಾರಾಂಶ

ಕೊರೋನಾ ಸಮಯದಲ್ಲಿ ಡಿಎಂಕೆ ಅಧಿಕಾರದಲ್ಲಿದ್ದರೆ ಸಿಎಂ ಸ್ಟಾಲಿನ್‌ ಸಾಯುತ್ತಿದ್ದರು ಎಂದು ಎಡಪ್ಪಾಡಿ ಪಳನಿಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸ್ಟಾಲಿನ್, ‘ಜನರಿಗಾಗಿ ಸಾಯಲು ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ಚೆನ್ನೈ/ವಿಲ್ಲುಪುರಂ (ಏ.10): ‘ಕೋರೋನಾ ಮಹಾಮಾರಿ ಇದ್ದಾಗ ರಾಜ್ಯದಲ್ಲಿ ಡಿಎಂಕೆ ಸರ್ಕಾರ ಇದ್ದಿದ್ದರೆ, ಸಿಎಂ ಸ್ಟಾಲಿನ್‌ ಸಾಯುತ್ತಿದ್ದರು’ ಎಂದು ಅಣ್ಣಾಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸ್ಟಾಲಿನ್‌ ಕೂಡ ತಿರುಗೇಟು ನೀಡಿದ್ದು, ‘ಜನರಿಗಾಗಿ ಸಾಯಲು ಹೆದರುವುದಿಲ್ಲ’ ಎಂದಿದ್ದಾರೆ.

DMK ಅಧಿಕಾರದಲ್ಲಿದ್ದಾಗ ಬರ, ಪ್ರವಾಹ

ಚೆನ್ನೈನಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ಪಳನಿಸ್ವಾಮಿ, ‘ಡಿಎಂಕೆ ಅಧಿಕಾರದಲ್ಲಿದ್ದಾಗ ಬರ, ಪ್ರವಾಹ, ಚಂಡಮಾರುತ ಅಥವಾ ಕೋರೋನಾ ಮಹಾಮಾರಿ ಬಂದಿರಲಿಲ್ಲ. ಒಂದೊಮ್ಮೆ ಬಂದಿದ್ದರೆ ಸ್ಟಾಲಿನ್‌ ಬದುಕಿರುತ್ತಿರಲಿಲ್ಲ’ ಎಂದು ಹೇಳಿದರು.

ಇದನ್ನೂ ಓದಿ: ಚುನಾವಣೆಗೂ ಮೊದಲೇ ಒಂದು ಕ್ಷೇತ್ರದಲ್ಲಿ ಸೋಲು ಕಂಡ ವಿಜಯ್ ನೇತೃತ್ವದ ಟಿವಿಕೆ ಪಾರ್ಟಿ

ಸ್ಟಾಲಿನ್‌ ತಿರುಗೇಟು:

ಇದಕ್ಕೆ ಪ್ರತ್ಯುತ್ತರ ನೀಡಿರುವ ಸ್ಟಾಲಿನ್‌, ‘ಸೋಲಿನ ಭಯದಲ್ಲಿ ಪಳನಿಸ್ವಾಮಿ ಪ್ರತಿದಿನ ಅಜಾಗರೂಕರಾಗಿ ಮಾತಾಡುತ್ತಿದ್ದಾರೆ ಹಾಗೂ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ಜನರ ರಕ್ಷಣೆಗೆ ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇನೆ. ಸಾವಿಗೂ ಹೆದರುವುದಿಲ್ಲ’ ಎಂದು ವಿಲ್ಲುಪಿರಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಂಚರಾಜ್ಯ ಚುನಾವಣೆ: ಕೇರಳ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆಯ ಮತದಾನ
ಸ್ವಂತ ಕಾರೂ ಇಲ್ಲದ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ: ದೀದಿ ಆಸ್ತಿ ಬರೀ 15.4 ಲಕ್ಷ