
ತಿರುವನಂತಪುರ(ಡಿ.30): ಮೃದು ಹಿಂದುತ್ವದಿಂದ ದೂರ ಉಳಿಯುವ ಹೆಸರಿನಲ್ಲಿ ಹಿಂದೂಗಳನ್ನು ಕಡೆಗಣಿಸುವುದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಅಧಿಕಾರ ಪಡೆಯಲು ನೆರವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಆದರೆ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ, ವಿವಾದಕ್ಕೆ ಕಾರಣವಾಗಿದೆ.
ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆ್ಯಂಟನಿ ‘ದೇಗುಲಕ್ಕೆ ಭೇಟಿ ನೀಡುವ, ಹಣೆಗೆ ತಿಲಕ ಇಡುವ ಹಿಂದುಗಳನ್ನು ನಾವು ಕಡೆಗಣಿಸಬಾರದು. ಏಕೆಂದರೆ ಮೋದಿ ವಿರುದ್ಧದ ಹೋರಾಟದಲ್ಲಿ ನಮಗೆ ಮುಸ್ಲಿಮರ ಜೊತೆಗೆ ಹಿಂದೂಗಳೂ ಬೇಕು. ಒಂದು ವೇಳೆ ಇಂಥವರನ್ನು ನಾವು ಕಡೆಗಣಿಸಿದರೆ ಅದು ದೆಹಲಿಯಲ್ಲಿ ಅಧಿಕಾರ ಪಡೆಯಲು ಮೋದಿಗೆ ನೆರವಾಗಲಿದೆ’ ಎಂದು ಹೇಳಿದ್ದಾರೆ.
ಹಿಂದೂಗಳನ್ನು ಓಡಿಸಿ ಎಂದು ಅರಬ್ ದೇಶಗಳಿಗೆ ಅಲ್‌ಖೈದಾ ಕರೆ: ಪ್ರಧಾನಿ ಮೋದಿ, ನೂಪುರ್ ಗುರಿಯಾಗಿಸಿ ಲೇಖನ ಪ್ರಕಟ
ಆ್ಯಂಟನಿ ಹೇಳಿಕೆಯನ್ನು ಕಾಂಗ್ರೆಸ್‌ನವರೇ ಆದ ಕೆ.ಮುರಳೀಧರನ್, ವಿ.ಡಿ.ಸತೀಶನ ಮೊದಲಾದವರು ಬೆಂಬಲಿಸಿದ್ದರೆ, ಕಾಸರಗೋಡು ಸಂಸದ ರಾಜಮೋಹನ್ ಉನ್ನೀಥನ್ ವಿರೋಧಿಸಿದ್ದಾರೆ. ಇಂಥ ನಿಲುವುಗಳನ್ನು ನಾನು ಒಪ್ಪುವುದಿಲ್ಲ ಎಂದಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಸದಾ ಮೃದು ಹಿಂದುತ್ವ ನೀತಿ ಅನುಸರಿಸಿದೆ. ಇಂಥ ನೀತಿ ಬಿಜೆಪಿ ಏಳಿಗೆ ಸಹಿಸಲು ನೆರವಾಗದು ಎಂದಿದೆ. ಇನ್ನೊಂದೆಡೆ ಬಿಜೆಪಿ ಕೂಡಾ ಕಾಂಗ್ರೆಸ್ ಅತಿದೊಡ್ಡ ಹಿಂದೂ ವಿರೋಧಿ ಪಕ್ಷವಾಗಿದ್ದು, ಅಲ್ಪಸಂಖ್ಯಾತ ಕೋಮುವಾದವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ