ಅಕ್ರಮ ಮದರಸಾ ಧ್ವಂಸ ಮಾಡಿದ ಬೆನ್ನಲ್ಲೇ ಪೊಲೀಸ್‌ ಪಡೆ ಮೇಲೆ ಕಲ್ಲು ತೂರಿದ ಮುಸ್ಲಿಮರು!

By Santosh NaikFirst Published Feb 8, 2024, 7:46 PM IST
Highlights

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಧಿಕಾರಿಗಳು ಅಕ್ರಮ ಮದರಸಾವನ್ನು ಧ್ವಂಸಗೊಳಿಸಿದ ಬೆನ್ನಲ್ಲಿಯೇ, ಮುಸ್ಲಿಮ್‌ ವ್ಯಕ್ತಿಗಳು ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದಲ್ಲದೆ, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ನವದೆಹಲಿ (ಫೆ.8): ಒಂದೆಡೆ ಏಕರೂಪ ನಾಗರೀಕ ಸಂಹಿತೆ ಜಾರಿ ಮಾಡಿದ ಬಳಿಕ ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ಉತ್ತರಾಖಂಡದಲ್ಲಿ ಗುರುವಾರ ಇನ್ನೊಂದು ಕೋಮು ವಾತಾವರಣ ನಿರ್ಮಾಣವಾಗಿದೆ. ಹಲ್ದ್ವಾನಿಯಲ್ಲಿ ಅಕ್ರಮ ಮದರಸಾವನ್ನು ಅಧಿಕಾರಿಗಳು ಗುರುವಾರ ಧ್ವಂಸ ಮಾಡಿದ ಬೆನ್ನಲ್ಲಿಯೇ ಗಲಭೆ ಆರಂಭವಾಗಿದೆ. ಮದರಸಾವನ್ನು ಕೆಡವಿದ್ದರಿಂದ ಸಿಟ್ಟಿಗೆದ್ದ ಕೆಲ ಮುಸ್ಲಿಂ ದುಷ್ಕರ್ಮಿಗಳು ಪೊಲೀಸ್‌ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ, ಪೊಲೀಸರ ಬೈಕ್‌ ಹಾಗೂ ಒಂದು ಕಾರ್‌ಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಲ್ದ್ವಾನಿಗೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗಿದ್ದು, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದಾರೆ. ಹಲ್ದ್ವಾನಿಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಇಂದು ಬಂಭುಲ್ಪುರ ಪೊಲೀಸ್ ಠಾಣೆ ಬಳಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನಂಬಲಾದ ಮದರಸಾವನ್ನು ಕೆಡವಿ ಹಾಕಿದ್ದರು. ಅದರ ಬೆನ್ನಲ್ಲಿಯೇ ಗಲಭೆ ಆರಂಭವಾಗಿದೆ.

ಮದರಸಾ ಕೆಡವಿ ಬೆನ್ನಲ್ಲಿಯೇ ಪ್ರತೀಕಾರವಾಗಿ, ಸಮೀಪದಲ್ಲಿ ವಾಸಿಸುವ ಮುಸ್ಲಿಂ ಸಮುದಾಯದ ಗುಂಪು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟವನ್ನು ಪ್ರಾರಂಭಿಸಿತು, ಇದರಿಂದಾಗಿ ಹಲವಾರು ಅಧಿಕಾರಿಗಳಿಗೆ ಗಾಯಗಳಾಗಿವೆ. ಈ ಪ್ರದೇಶದಲ್ಲಿ ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದಲ್ಲದೆ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅನಧಿಕೃತ ಮದರಸಾ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಹೆಚ್ಚುವರಿಯಾಗಿ, ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹಚ್ಚಲಾಗಿದ್ದು, ಸುತ್ತಮುತ್ತಲಿನ ವಿದ್ಯುತ್ ವ್ಯತ್ಯಯವಾಗಿದೆ. ಜನಸಮೂಹವು ಬಂಭುಲ್ಪುರ ಪೊಲೀಸ್ ಠಾಣೆಯನ್ನು ಸುತ್ತುವರಿದಿದ್ದರಿಂದ ಹಲವಾರು ಪತ್ರಕರ್ತರು ಮತ್ತು ಆಡಳಿತ ಅಧಿಕಾರಿಗಳು ಪೊಲೀಸ್ ಠಾಣೆಯೊಳಗೆ ಸಿಲುಕಿಕೊಂಡಿದ್ದಾರೆ.

1281 ಮದರಸಾ ಇಂದಿನಿಂದಲೇ ಜನರಲ್ ಪಬ್ಲಿಕ್ ಸ್ಕೂಲ್, ಸಿಎಂ ಹಿಮಂತ ಬಿಸ್ವಾ ಆದೇಶ!

click me!