
ನವದೆಹಲಿ (ಸೆ.25) ಸೈಕ್ಲೋನ್‌ನಿಂದ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದೆ. ಉರಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ನಡುವೆ ದಿಢೀರ್ ಮಳೆ ವಕ್ಕರಿಸಿದೆ. ಕರ್ನಾಟಕ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ವಿಜನಯಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇನ್ನು ಆರ್ನಾಬ್ ಸೈಕ್ಲೋನ್ ಪರಿಣಾಮ ಆಂಧ್ರ ಪ್ರದೇಶ ಹಾಗೂ ಒಡಿಶಾದಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದೆ. ಇನ್ನು ಸಿಕ್ಕಿಂನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಕೆಲ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅರ್ನಾಬ್ ಚಂಡಮಾರುತ ಪರಿಣಾಮ ಒಡಿಶಾ ಕರವಾಳಿ ಭಾಗ ಹಾಗೂ ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಬಿರುಗಾಳಿ ಸಹಿತ ಮಳೆಯಿಂದ ಜನರು ತತ್ತರಿಸಿದ್ದಾರೆ. ಮುನ್ನಚ್ಚೆರಿಕಾ ಕ್ರಮವಾಗಿ ಒಡಿಶಾದ ನಬರಂಗಪುರ, ಕಲಾಹಂಡಿ, ಗಜಪತಿ ಸೇರಿದಂತೆ 5 ಜಿಲ್ಲೆಗಳ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ 12 ಗಂಟೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಒಡಿಶಾದ ಕೆಲ ಜಿಲ್ಲೆಗಳಲ್ಲಿ ಆತಂಕ ಪರಿಸ್ಥಿತಿ ಹೆಚ್ಚಾಗಿರುವ ಕಾರಣ ಜಿಲ್ಲಾಡಳಿತ 8000 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾದ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಆತಂಕ ಎದುರಾಗಿದೆ. ಕೆಲ ಜಿಲ್ಲೆಗಳ ತಗ್ಗು ಪ್ರದೇಶಗಳು ಮುಳುಗಡೆ ಭೀತಿ ಎದುರಿಸುತ್ತಿದೆ. ಭಾರಿ ಬಿರುಗಾಳಿ ಸಹಿತ ಮಳೆಗೆ ರಸ್ತೆಗಳಿಗೆ ಮರಗಳು ಉರುಳು ಬಿದ್ದು ರಸ್ತೆ ಸಂಚಾರದಲ್ಲೂ ಅಸ್ತವ್ಯಸ್ತವಾಗಿದೆ. ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.
ಒಡಿಶಾದಲ್ಲಿ ಸೈಕ್ಲೋನ್ ಪರಿಣಾಮ ಗಂಭೀರವಾಗುತ್ತಿದೆ. ಮಲಿಗುರ ಹಾಗೂ ಚತ್ತಾರಿಪುಟ್ ರೈಲು ನಿಲ್ದಾಣಗಳ ನಡುವಿನ ಸಂಚಾರ ಅಸ್ತವ್ಯಸ್ತಗೊಂಡಿದೆ. ನಾಲ್ಕು ರೈಲು ಸಂಚಾರ ರದ್ದಾಗಿದೆ. ಕೆಲ ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಚಾರ ವ್ಯತ್ಯಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಆಂಧ್ರ ಪ್ರದೇಶದ ಕರಾವಳಿ ಜಿಲ್ಲಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ. ವಿಶಾಖಪಟ್ಟಣಂ ಸೇರಿದಂತೆ ಕೆಲೆವೆಡೆ ಗುರುವಾರ 28 ಸಿಎಂರಷ್ಟು ಮಳೆಯಾಗಿದೆ. ಆಂಧ್ರ ಪ್ರದೇಶದ ಕೆಲ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಕ್ಕಿಂನ ಗ್ಯಾಲ್ಶಿಂಗ್ ಜಿಲ್ಲೆಯ ರಿಂಬಿ ಗ್ರಾಮದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಹಲವು ಮನೆಗಳು ಭೂಕುಸಿತದಲ್ಲಿ ಕೊಚ್ಚಿ ಹೋಗಿದೆ. ಸರ್ಕಾರಿ ಕಟ್ಟಡಗಳು ಸೇರಿದಂತೆ ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಸದ್ಯದ ವರದಿ ಪ್ರಕಾರ ಯಾವುದೇ ಸಾವು ನೋವು ಸಂಭವಿಸಿಲ್ಲ. ಸಿಕ್ಕಿಂನಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ