ಜೂ.17ರ ವರೆಗೆ ಕರ್ನಾಟಕ ಸೇರಿ 17 ರಾಜ್ಯದಲ್ಲಿ ಭಾರಿ ಮಳೆ, IMD ಎಚ್ಚರಿಕೆ

Published : Jun 11, 2025, 07:31 PM IST
Bihar Rain Alert

ಸಾರಾಂಶ

ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಅತೀಯಾದ ಮಳೆ, ಅನಾಹುತ ಸೃಷ್ಟಿಸುವ ಸಾಧ್ಯತೆ ಇದೆ ಎಂದಿದೆ.

ನವದೆಹಲಿ(ಜೂ.11) ಮುಂಗಾರು ಮಳೆ ಮೂಲಕ ಮೇ ತಿಂಗಳಲ್ಲೇ ದಾಖಲೆ ಬರೆದ ಮಳೆರಾಯ ಕೆಲ ದಿನಗಳ ಬಿಡುವಿನ ಬಳಿಕ ಇದೀಗ ಮತ್ತೆ ಆರಂಭಗೊಂಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೀಗ ಹವಾಮಾನ ಇಲಾಖೆ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ ಎಂದಿದೆ. ಭಾರಿ ಮಳೆಯಿಂದ ಅತೀಯಾದ ಮಳೆ ಹಲೆವೆಡೆ ಅನಾಹುತ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರ್ನಾಟಕ ಸೇರಿ 17 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ.

ಜೂನ್ 12 ರಿಂದ 17ರ ವರೆಗೆ ಭಾರಿ ಮಳೆ

ಹವಾಮಾನ ಇಲಾಖೆ ನೀಡಿರು ಎಚ್ಚರಿಕೆ ಪ್ರಕಾರ ಜೂನ್ 12 ರಿಂದ ಜೂನ್ 17ರ ವರೆಗೆ ಭಾರಿ ಮಳೆಯಾಗಲಿದೆ ಎಂದಿದೆ. ನದಿಗಳು, ಹಳ್ಳ, ಕೊಳ್ಳಗಳು ಉಕ್ಕಿ ಹರಿಯಲಿದೆ. ಮಳೆ ಪ್ರಮಾಣ ಹೆಚ್ಚಾಗುವ ಕಾರಣ ನೀರಿನ ಪ್ರಮಾಣ ಅತಿಯಾಗಲಿದೆ. ಅತೀಯಾದ ಮಳೆಯಿಂದ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.

ಯಾವೆಲ್ಲಾ ರಾಜ್ಯದಲ್ಲಿ ಭಾರಿ ಮಳೆ?

ಕರ್ನಾಟಕ, ಕೇರಳ,ಗೋವಾ, ಮಹಾರಾಷ್ಟ್ರ, ಅಂಡಮಾನ್ ನಿಕೋಬಾರ್, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ತಮಿಳುನಾಡು, ಪುದುಚೇರಿ, ತೆಲಂಗಾಣ, ಉತ್ತರಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈ ಪೈಕಿ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗಲಿದೆ. ಇನ್ನು ಈಶಾನ್ಯ ರಾಜ್ಯಗಳು ಈಾಗಲೇ ಮಳೆಯಿಂದ ತತ್ತರಿಸಿದೆ. ಇಲ್ಲಿ ಮತ್ತಷ್ಟು ಮಳೆ ಅವಾಂತರ ಹೆಚ್ಚಿಸಲಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಜೂನ್ 12ರಿಂದ 15ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗುಡುಗು, ಗಾಳಿ ಸಹಿತ ಮಳೆ ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಲ್ಲಿ ಆಗಲಿದೆ. ಇನ್ನು ಕೊಡುಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇತ್ತ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮೀಣದಲ್ಲೂ ಭಾರಿ ಮಳೆಯಾಗಲಿದೆ ಎಂದಿದೆ.

ಕರ್ನಾಟಕ್ಕೆ ಈ ಬಾರಿ ಮುಂಗಾರು ಮಳೆ ಮೇ.24 ರಂದೇ ಅಪ್ಪಳಿಸಿತ್ತು.ಈ ಮೂಲಕ ಹಲವು ವರ್ಷಗಳ ದಾಖಲೆಯನ್ನೇ ಮುರಿದಿತ್ತು. ಮೇ ತಿಂಗಳಲ್ಲಿ ಗರಿಷ್ಠ ಮಳೆಯಾಗುವ ಮೂಲಕ ಕರ್ನಾಟಕಗ ಬಹುತೇಕ ಜಲಾಶಗಳು ತುಂಬಿತ್ತು. ಇದೀಗ ಜೂನ್ 12 ರಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಸೂಚಿಸಲಾಗಿದೆ.

ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆ

ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಬೆಂಗಳೂರಿನ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಇಂದು ಸಂಜೆ ಕಾರ್ಪೊರೇಷನ್, ವಿಧಾನಸೌಧ, ಎಸ್.ಆರ್ ನಗರ, ಮಲ್ಲೇಶ್ವರಂ, ಶೇಶಾದ್ರಿಪುರಂ,ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಹಲವು ರಸ್ತೆಗಳು ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಪರದಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ
ಆನ್‌ಲೈನ್ ಆರ್ಡರ್ ಮಾಡಿದ್ರೆ ಕೇಕ್ ಮೇಲೆ ಹೀಗಾ ಬರೆಯೋದು?: ಕೇಕ್ ಮೇಲಿನ ಬರಹ ನೋಡಿ ಬರ್ತ್‌ಡೇ ಗರ್ಲ್ ಶಾಕ್