ಕೇರಳ ಭೂಕುಸಿತ, ಹಿಮಾಚಲ ಪ್ರದೇಶ ಪ್ರವಾಹದ ಬೆನ್ನಲ್ಲೇ ಇದೀಗ ಮತ್ತೊಂದು ಎಚ್ಚರಿಕೆ ಸಂದೇಶ ಬಂದಿದೆ. ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮೆಘಸ್ಫೋಟದ ಸಂಭವವಿದ್ದರೆ, ದಕ್ಷಿಣ ಭಾರತ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ನವದೆಹಲಿ(ಆ.10) ಭಾರತ ಭಾರಿ ಮಳೆ, ಪ್ರವಾಹ, ಭೂಕುಸಿತ ದುರಂತದಿಂದ ಇನ್ನು ಚೇತರಿಸಿಕೊಂಡಿಲ್ಲ. ವಯಾನಾಡು ದುರಂತ, ಹಿಮಾಚಲ ಪ್ರದೇಶ ಪ್ರವಾಹ ಹೊಡೆತಕ್ಕೆ ದೇಶವೇ ನಲುಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ. ಮುಂದಿನ ಮೂರರಿಂದ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇದೇ ವೇಳೆ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲೂ ಈ ಮಳೆ ಅನಾಹುತ ಸೃಷ್ಟಿಸುವ ಸಾಧ್ಯತೆಯನ್ನು ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಹಿಮಾಲಯದ ಭಾಗದಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. ಇದರಿಂದ ಹಿಮಾಚಲ ಪ್ರದೇಶ, ಉತ್ತರಖಂಡ, ಪೂರ್ವ ರಾಜಸ್ಥಾನ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಗಡುಗು ಸಿಡಿಲು ಸಹಿತ ಈ ಮಳೆ ಅನಾಹುತ ಸೃಷ್ಟಿಸುವ ಸಾಧ್ಯತೆ ಇದೆ. ಜಮ್ಮು ಕಾಶ್ಮೀರ, ಉತ್ತರ ಪ್ರದೇಶ, ಪಂಜಾಬ್ ಹರ್ಯಾಣ, ಚಂಡೀಘಡ ಹಾಗೂ ದೆಹಲಿಯಲ್ಲೂ ಈ ಮಳೆ ಅಬ್ಬರಿಸಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.
ಅನ್ನ ಹಾಕಿದ ಒಡತಿಯ ಮೃತದೇಹ ಪತ್ತೆ ಹಚ್ಚಿದ ನಾಯಿ, ತುಂಡಾದ ಶವ ಹೊರತೆಗೆದ ರಕ್ಷಣಾ ತಂಡ!
ಮಧ್ಯ ಪ್ರದೇಶ, ವಿದರ್ಭ, ಚತ್ತೀಸಘಡ, ಕೊಂಕಣ ಭಾಗ ಹಾಗೂ ಗೋವಾದಲ್ಲೂ ಭಾರಿ ಮಳೆಯಾಗಲಿದೆ. ಇತ್ತ ಈಶಾನ್ಯ ರಾಜ್ಯಗಳಲ್ಲೂ ಮಳೆ ಅಬ್ಬರ ಹೆಚ್ಚಾಲಿದೆ. ಇತ್ತ ದಕ್ಷಿಣ ಭಾರತದಲ್ಲಿ ಬಹುತೇಕ ರಾಜ್ಯಗಳಲ್ಲಿ ಮಳೆಯಾಗಲಿದೆ. ಆದರೆ ಕೇರಳ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಆಗಸ್ಟ್ 11 ಹಾಗೂ 12ರಂದು ಈ ರಾಜ್ಯದಲ್ಲಿ ಭಾರಿ ಮಳೆಯಾಗುವ ಕಾರಣ ಪ್ರವಾಹ ಭೀತಿ ಎದುರಾಗಲಿದೆ. ಭೂಕುಸಿತ ಸಂಭವಗಳೂ ಇರಲಿದೆ. ಹೀಗಾಗಿ ಅತೀವ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕೇರಳದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದೆ. ವಯಾನಾಡು ದುರಂತದ ಬಳಿಕ ಮಳೆ ಪ್ರಮಾಣ ತಗ್ಗಿದೆ. ಆದರೆ ಇಂದಿನಿಂದ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆಯನ್ನು ಸೂಚಿಸಲಾಗಿದೆ. ಹೀಗಾಗಿ ನದಿ ಪಾತ್ರದ ಜನರು, ಬೆಟ್ಟ ಗುಡ್ಡಗಳ ತಪ್ಪಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಳಾಂತರಿಸುವ ಅಗತ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ಭಾರತದ ಬಹುತೇಕ ರಾಜ್ಯಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸೂಚನೆ ನೀಡಲಾಗಿದೆ.
ವಯನಾಡಿನಲ್ಲಿ 6 ದಿನಗಳ ಬಳಿಕ ಮಾಲೀಕನ ಪತ್ತೆ ಹಚ್ಚಿದ ನಾಯಿ, ಹೃದಯಸ್ಪರ್ಶಿ ವಿಡಿಯೋ!