2024 Lok Sabha Election: 'ಶೇ.50ಕ್ಕಿಂತ ಹೆಚ್ಚಿನ ಮತ ಗಳಿಸಬೇಕು..' ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಟಾರ್ಗೆಟ್‌!

Published : Dec 23, 2023, 07:06 PM IST
2024 Lok Sabha Election: 'ಶೇ.50ಕ್ಕಿಂತ ಹೆಚ್ಚಿನ ಮತ ಗಳಿಸಬೇಕು..' ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಟಾರ್ಗೆಟ್‌!

ಸಾರಾಂಶ

ಸಾರ್ವತ್ರಿಕ ಚುನಾವಣೆಗೆ ಮುನ್ನ ನಡೆದ ಬಿಜೆಪಿಯ ಮಹತ್ವದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ 50 ಪ್ರತಿಶತಕ್ಕೂ ಹೆಚ್ಚು ಮತಗಳನ್ನು ಗಳಿಸುವ ಗುರಿಯನ್ನು ಹೊಂದುವಂತೆ ಪಕ್ಷದ ನಾಯಕರಿಗೆ ಸಲಹೆ ನೀಡಿದ್ದಾರೆ.

ನವದೆಹಲಿ (ಡಿ.23): ಮುಂದಿನ ಲೋಕಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಉಳಿದಿದ್ದು, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.50ಕ್ಕೂ ಹೆಚ್ಚು ಮತಗಳನ್ನು ಗಳಿಸುವ ಗುರಿಯನ್ನು ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಶುಕ್ರವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಪ್ರಮುಖ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು "ಮಿಷನ್ ಮೋಡ್" ನಲ್ಲಿ ಕೆಲಸ ಮಾಡಲು ತಮ್ಮ ಪದಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. "ನಾವು 2019 ರಲ್ಲಿ 303 ಸ್ಥಾನಗಳನ್ನು ಗೆದ್ದಿದ್ದೇವೆ ಮತ್ತು ನಾವು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಿದರೆ 2024 ರಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ" ಎಂದು ಪ್ರಧಾನಿ ಹೇಳಿದರು. "ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿಯಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ" ಮತ್ತು "ಪ್ರತಿಪಕ್ಷಗಳ ನಕಾರಾತ್ಮಕ ಪ್ರಚಾರಕ್ಕೆ ಸತ್ಯಗಳೊಂದಿಗೆ ಸಕಾರಾತ್ಮಕ ಉತ್ತರಗಳನ್ನು ನೀಡಿ" ಎಂದು ಅವರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ. ಸಾರ್ವತ್ರಿಕ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕರೆದ ಎರಡು ದಿನಗಳ ಸಭೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಎಲ್ಲ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಜನಪ್ರಿಯಗೊಳಿಸಲು ಮತ್ತು ಜಾಗೃತಿ ಮೂಡಿಸಲು ಸರ್ಕಾರ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಅಭಿಯಾನವಾದ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಮುಂದಿನ ಕಾರ್ಯಾಚರಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರದ "ಒಳ್ಳೆಯ ಕೆಲಸ"ಗಳ ಸುತ್ತ ತಮ್ಮ ಪ್ರಚಾರವನ್ನು ತೀವ್ರಗೊಳಿಸುವಂತೆ ಪಕ್ಷದ ನಾಯಕರಿಗೆ ಸಲಹೆ ನೀಡಲಾಗಿದೆ.

ಸಭೆಯಲ್ಲಿ ಚರ್ಚಿಸಲಾದ ಇತರ ವಿಷಯಗಳೆಂದರೆ ಐದು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳು ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಪಕ್ಷದ ರಾಷ್ಟ್ರವ್ಯಾಪಿ ಯೋಜನೆಗಳನ್ನು ಒಳಗೊಂಡಿವೆ. ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಇತ್ತೀಚಿನ ಗೆಲುವಿನ ನಂತರ, ಕೇಸರಿ ಪಕ್ಷದ ನಾಯಕರು ಮೇ 2024 ರ ಮೊದಲು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2024 ರ ಚುನಾವಣೆಗೆ ಸಿದ್ಧರಾಗಿ: ಬಿಜೆಪಿ ಪದಾಧಿಕಾರಿಗಳಿಗೆ ಪ್ರಧಾನಿ ಮೋದಿ ಕರೆ

ಡಿಸೆಂಬರ್ 13 ರಂದು ಚುನಾವಣಾ ಫಲಿತಾಂಶದ ನಂತರ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ "ಹ್ಯಾಟ್ರಿಕ್" 2024 ರ ಲೋಕಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಹ್ಯಾಟ್ರಿಕ್‌ ಅಧಿಕಾರ ಖಾತರಿಪಡಿಸಿದೆ ಎಂದು ಹೇಳಿದ್ದರು.

ನೂತನ ಸಂಸತ್‌ ಭವನದ ಮೊದಲ ಚಳಿಗಾಲದ ಅಧಿವೇಶ ಅಂತ್ಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ