ನವದೆಹಲಿ(ಏ.10): ಕೊರೋನಾ ವೈರಸ್ ವಿರುದ್ಧ ಹೋರಾಡಲು ಜಾಗತಿಕ ಔಷಧ ಕಂಪನಿ ಜಾನ್ಸನ್ ಅಂಡ್ ಜಾನ್ಸನ್ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಲಸಿಕೆಯನ್ನು ಭಾರತದಲ್ಲಿ ಕ್ಲಿನಿಕಲ್ ಟ್ರಯಲ್‌ಗೆ ಒಳಪಡಿಸುವ ಸಂಬಂಧ ಕೇಂದ್ರ ಸರ್ಕಾರದ ಜತೆ ಆ ಕಂಪನಿ ಮಾತುಕತೆಯಲ್ಲಿ ನಿರತವಾಗಿದೆ.
ಈಗಾಗಲೇ ಅಮೆರಿಕದ ಆಹಾರ ಮತ್ತು ಔಷಧ ನಿಯಂತ್ರಣ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಪರೀಕ್ಷೆಗೆ ಅನುಮತಿ ಕೋರಿ ಕಂಪನಿ ಮಾತುಕತೆಯಲ್ಲಿ ನಿರತವಾಗಿದೆ ಎಂದು ವಕ್ತಾರರು ಇ-ಮೇಲ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆಯನ್ನು ರೆಫ್ರಿಜರೇಟರ್ ತಾಪಮಾನದಲ್ಲೂ ಸಂಗ್ರಹಿಸಬಹುದಾಗಿದೆ.
ಸದ್ಯ ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ನಾಗರಿಕರಿಗೆ ನೀಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ