
ನವದೆಹಲಿ(ಅ.10): ಶನಿವಾರ ಇಬ್ಬರು ಕನ್ನಡಿಗರು(Kannadiga) ಸೇರಿ 8 ಜನ ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್‌ಗಳಿಗೆ(High Court) ಮುಖ್ಯ ನ್ಯಾಯಾಧೀಶರನ್ನಾಗಿ ಕೇಂದ್ರ ಕಾನೂನು ಸಚಿವಾಲಯ ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಹೈಕೋರ್ಟ್‌ನ(Karnataka High Court) ನ್ಯಾಯಾಧೀಶರಾದ ನ್ಯಾ| ಅರವಿಂದ್ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ. ಹಿಮಾಚಲ ಪ್ರದೇಶ ಹೈಕೋರ್ಟ್‌ನ(Himachal Pradesh) ಹಂಗಾಮಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ಮೂಲದ ಆರ್.ವಿ ಮಳಿಮಠ ಅವರನ್ನುಮಧ್ಯ ಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಕರ್ನಾಟಕದ ಹೈಕೋರ್ಟ್ ಮುಖ್ಯನ್ಯಾಯಾಧೀಶರಾಗಿ ನ್ಯಾ| ರಿತುರಾಜ್ ಅವಸ್ಥಿ ನೇಮಕವಾಗಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನ್ಯಾ| ರಿತು ರಾಜ್ ಅವಸ್ಥಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ. ಕರ್ನಾಟಕದ ಹಂಗಾಮಿ ಮುಖ್ಯನಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ.
ಇದೇ ವೇಳೆ, ಇದರೊಂದಿಗೆ 5 ಮುಖ್ಯನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸೆಪ್ಟೆಂಬರ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧ್ಯಕ್ಷತೆಯ ಸುಪ್ರೀಂ ಕೋರ್ಟ್ ಕೊಲಿಜಿಯಂ 13 ಹೈಕೋರ್ಟ್‌ಗಳಿಗೆ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಶಿಫಾರಸು ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ