ಕರ್ನಾಟಕಕ್ಕೆ ಕೇಂದ್ರದಿಂದ 475 ಕೋಟಿ!

By Suvarna NewsFirst Published May 10, 2021, 9:59 AM IST
Highlights

* ಕೊರೋನಾ ನಿಯಂತ್ರಣ: ಕರ್ನಾಟಕದ ಸ್ಥಳೀಯ ಸಂಸ್ಥೆಗಳಿಗೆ 475 ಕೋಟಿ

* ಕೇಂದ್ರದಿಂದ 25 ರಾಜ್ಯಗಳಿಗೆ ಒಟ್ಟಾರೆ 8,923 ಕೋಟಿ ನೆರವು

*ಮಾಹಿತಿ ನೀಡಿದ  ಹಣಕಾಸು ಸಚಿವಾಲಯ 

ನವದೆಹಲಿ(ಮೇ.10): ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 25 ರಾಜ್ಯಗಳಿಗೆ 8,923 ಕೋಟಿ ರು. ನೆರವನ್ನು ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ. ಈ ಪೈಕಿ ಕರ್ನಾಟಕಕ್ಕೆ 475 ಕೋಟಿ ರು. ಬಿಡುಗಡೆ ಮಾಡಲಾಗಿದೆ.

ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಆಗಲಿದೆ. ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ ಕೈಗೊಳ್ಳಲು ಅನುದಾನ ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಕಂತಿನ ಅನುದಾನ ಜೂನ್‌ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!