ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕಳೆದ 24 ತಾಸುಗಳಲ್ಲಿ ದೈನಂದಿನ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದೆ| ಸೋಂಕು ಪತ್ತೆ, ತಪಾಸಣೆ ಹೆಚ್ಚಳಕ್ಕೆ ಕೇಂದ್ರ ಸಲಹೆ
ನವದೆಹಲಿ(ಫೆ.28): ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕಳೆದ 24 ತಾಸುಗಳಲ್ಲಿ ದೈನಂದಿನ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಆತ್ಮನಿರ್ಭರ ಭಾರತದ ಮಂತ್ರ ಹಳ್ಳಿ ಹಳ್ಳಿಗೂ ತಲುಪುತ್ತಿದೆ: ಮೋದಿ ಮನ್ ಕೀ ಬಾತ್!
undefined
ಇದೇ ವೇಳೆ ಕಳೆದ 2 ವಾರದಿಂದ ಅತಿ ಹೆಚ್ಚು ಪ್ರಕರಣ ದಾಖಲಾಗುತ್ತಿರುವ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ತೆಲಂಗಾಣ, ಜಮ್ಮು-ಕಾಶ್ಮೀರದ ಮುಖ್ಯಕಾರ‍್ಯದರ್ಶಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಶನಿವಾರ ಸಭೆ ನಡೆಸಿದ್ದು, ತತ್‌ಕ್ಷಣದಿಂದಲೇ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಜಿಲ್ಲಾಮಟ್ಟದಲ್ಲಿ ಶೀಘ್ರ ಸೋಂಕು ಪತ್ತೆ ಮತ್ತು ತಪಾಸಣೆ ಹೆಚ್ಚಳ ಮಾಡುವಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ನಿರ್ದೇಶಿಸಲಾಗಿದೆ.
ಈ ನಡುವೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ಅನ್ನು ಮಾ.8ರವರೆಗೆ ವಿಸ್ತರಿಸಲಾಗಿದೆ.