
ನವದೆಹಲಿ(ಆ.13) ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಭಾರಿ ತಯಾರಿಗಳು ನಡೆದಿದೆ. ಜೊತೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 77ನೇ ಸ್ವಾತಂತ್ಯ ದಿನಾಟರಣೆ ಆಚರಿಸಲಿದ್ದಾರೆ. ಧ್ವಜಾರೋಹಣ ನೇರವೇರಿಸಿ ದೇಶವನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ಈ ಬಾರಿ ಕೆಂಪು ಕೋಟೆ ಸ್ವಾತಂತ್ರ್ಯ ದಿನಾಚರಣೆಗೆ 1,800 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ. ರೈತರು, ಮೀನುಗಾರರು, ಕಾರ್ಮಿಕರು, ಶಿಕ್ಷಕರು ಸೇರಿದಂತೆ 1,800 ಜನರನ್ನು, ಅವರ ಕುಟುಂಬದೊಂದಿಗೆ, ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಜನ ಭಾಗೀದಾರಿ ಪರಿಕಲ್ಪನೆಯಡಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.
ಈ ವಿಶೇಷ ಅತಿಥಿಗಳು 660 ಕ್ಕೂ ಹೆಚ್ಚು ವಿವಿಧ ಗ್ರಾಮಗಳ 400 ಕ್ಕೂ ಹೆಚ್ಚು ಸರಪಂಚರನ್ನು ಒಳಗೊಂಡಿದ್ದಾರೆ. ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250 ಮಂದಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ ತಲಾ 50 ಮಂದಿಗೆ ಆಹ್ವಾನ ನೀಡಲಾಗಿದೆ. ಇನ್ನು ಹೊಸ ಸಂಸತ್ತಿನ ಕಟ್ಟಡ ಸೇರಿದಂತೆ ಕೇಂದ್ರ ವಿಸ್ಟಾ ಯೋಜನೆಯ 50 ಶ್ರಮ ಯೋಗಿಗಳು (ನಿರ್ಮಾಣ ಕೆಲಸಗಾರರು), ಖಾದಿ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ತಲಾ 50 ಮತ್ತು ತಲಾ 50 ಪ್ರಾಥಮಿಕ ಶಾಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನು ದಾದಿಯರು ಮತ್ತು ಮೀನುಗಾರರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆ.15ರ ಮೋದಿ ಕೆಂಪು ಕೋಟೆ ಭಾಷಣದ ವೇಳೆ ಅಮೆರಿಕ ಸಂಸದರು ಭಾಗಿ
ಈ ಆಹ್ವಾನಿತರ ಜೊತೆಗೆ ಪ್ರತಿ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶದಿಂದ ಎಪ್ಪತ್ತೈದು ದಂಪತಿಗಳನ್ನು ಅವರ ಸಾಂಪ್ರದಾಯಿಕ ಉಡುಗೆಯಲ್ಲಿ, ಕೆಂಪು ಕೋಟೆಯಲ್ಲಿ ಸಮಾರಂಭವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್, ವಿಜಯ್ ಚೌಕ್, ನವದೆಹಲಿ ರೈಲು ನಿಲ್ದಾಣ, ಪ್ರಗತಿ ಮೈದಾನ, ರಾಜ್ ಘಾಟ್, ಜಾಮಾ ಮಸೀದಿ ಮೆಟ್ರೋ ನಿಲ್ದಾಣ, ರಾಜೀವ್ ಚೌಕ್ ಮೆಟ್ರೋ ನಿಲ್ದಾಣ, ದೆಹಲಿ ಗೇಟ್ ಮೆಟ್ರೋ ನಿಲ್ದಾಣ, ITO ಮೆಟ್ರೋ ಗೇಟ್, ನೌಬತ್ ಖಾನಾ ಮತ್ತು ಶೀಶ್ ಗಂಜ್ ಗುರುದ್ವಾರ ಸೇರಿದಂತೆ 12 ಸ್ಥಳಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಮೀಸಲಾದ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.
ಜಾಗತಿಕವಾಗಿ ಭರವಸೆ ಮೂಡಿಸಿರುವ ಯೋಜನೆಗಳು/ಉಪಕ್ರಮಗಳು: ಲಸಿಕೆ ಮತ್ತು ಯೋಗ; ಉಜ್ವಲ ಯೋಜನೆ; ಬಾಹ್ಯಾಕಾಶ ಶಕ್ತಿ; ಡಿಜಿಟಲ್ ಇಂಡಿಯಾ; ಕೌಶಲ್ಯ ಭಾರತ; ಸ್ಟಾರ್ಟ್ ಅಪ್ ಇಂಡಿಯಾ; ಸ್ವಚ್ಛ ಭಾರತ; ಸಶಕ್ತ ಭಾರತ, ನಯಾ ಭಾರತ; ಬಲಿಷ್ಠ ಭಾರತ; ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಜಲ ಜೀವನ್ ಮಿಷನ್.
ಭಾರತದ ಸ್ವಾತಂತ್ರ್ಯಕ್ಕೆ ಕೇಳಿದ್ರು ಶುಭ ಮಹೂರ್ತ, ಆಗಸ್ಟ್ 15ರ ದಿನಕ್ಕಾಗಿ ಕೇಳಲಾಗಿತ್ತು ಜಾತಕ!
ಆಚರಣೆಯ ಭಾಗವಾಗಿ, ರಕ್ಷಣಾ ಸಚಿವಾಲಯವು ಆಗಸ್ಟ್ 15-20 ರಿಂದ MyGov ಪೋರ್ಟಲ್ ನಲ್ಲಿ ಆನ್‌ಲೈನ್ ಸೆಲ್ಫಿ ಸ್ಪರ್ಧೆಯನ್ನು ನಡೆಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು 12 ಸ್ಥಾಪನೆ (Installation) ಗಳಲ್ಲಿ ಒಂದು ಅಥವಾ ಹೆಚ್ಚಿನ ಸೆಲ್ಫಿಗಳನ್ನು ತೆಗೆದುಕೊಳ್ಳಲು ಮತ್ತು ಅವುಗಳನ್ನು MyGov ಪ್ಲಾಟ್ ಫಾರ್ಮ್ ನಲ್ಲಿ ಅಪ್ ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತದೆ. ಆನ್ ಲೈನ್ ಸೆಲ್ಫಿ ಸ್ಪರ್ಧೆಯ ಆಧಾರದ ಮೇಲೆ ಪ್ರತಿ ಸ್ಥಾಪನೆಯಿಂದ ಒಬ್ಬರಂತೆ ಹನ್ನೆರಡು ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತರಿಗೆ ತಲಾ 10,000 ರೂಪಾಯಿ ಬಹುಮಾನ ನೀಡಲಾಗುತ್ತದೆ.
ಮಾರ್ಚ್ 12, 2021 ರಂದು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಸಬರಮತಿ ಆಶ್ರಮದಿಂದ ಪ್ರಧಾನ ಮಂತ್ರಿಯವರು ಪ್ರಾರಂಭಿಸಿದ 'ಆಜಾದಿ ಕಾ ಅಮೃತ ಮಹೋತ್ಸವ' ಆಚರಣೆಯು ಈ ವರ್ಷದ ಸ್ವಾತಂತ್ರ್ಯ ದಿನದಂದು ಮುಕ್ತಾಯಗೊಳ್ಳುತ್ತದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಮೋದಿಯವರ ಕನಸನ್ನು ನನಸಾಗಿಸಲು ಕೇಂದ್ರ ಸರ್ಕಾರ ಅವಿರತ ಶ್ರಮವಹಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ