
ನವದೆಹಲಿ(ಜೂ.24): ಪಾಕಿಸ್ತಾನದ ರಾಯಭಾರ ಕಚೇರಿ ಸಿಬ್ಬಂದಿ ಭಾರತದ ವಿರುದ್ಧ ಗೂಢಚರ್ಯೆ ನಡೆಸುತ್ತಿರುವ ಮತ್ತು ಭಯೋತ್ಪಾಕದ ಸಂಘಟನೆಗಳ ಜೊತೆ ಶಾಮೀಲಾಗಿರುವ ಆರೋಪದ ಬೆನ್ನಲ್ಲೇ, ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ನ ಸಿಬ್ಬಂದಿ ಬಲವನ್ನು ಮುಂದಿನ ಏಳು ದಿನಗಳ ಒಳಗಾಗಿ ಅರ್ಧದಷ್ಟುಇಳಿಕೆ ಮಾಡಬೇಕು ಎಂದು ಪಾಕಿಸ್ತಾನಕ್ಕೆ ಭಾರತ ಮಂಗಳವಾರ ಸೂಚನೆ ನೀಡಿದೆ.
ಗಡಿಯಲ್ಲಿ ಮತ್ತೆ ಪಾಕಿಸ್ತಾನ ದಾಳಿ: ಯೋಧ ಹುತಾತ್ಮ!
ಅಲ್ಲದೇ ಇಸ್ಲಾಮಾಬಾದ್‌ನಲ್ಲಿರುವ ಕಚೇರಿಯಿಂದ ತನ್ನ ಸಿಬ್ಬಂದಿ ಬಲವನ್ನು ಕಡಿತಗೊಳಿಸುತ್ತಿರುವುದಾಗಿಯೂ ಭಾರತ ಪ್ರಕಟಿಸಿದೆ. ಪಾಕಿಸ್ತಾನ ಹೈಕಮಿಷನ್ ಕಚೇರಿಯ ಅಧಿಕಾರಿಯನ್ನು ಕರೆಸಿಕೊಂಡು ಈ ನಿರ್ಧಾರವನ್ನು ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಪಾಕ್ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಗಡೀಪಾರು!
ಇತ್ತೀಚೆಗೆ ಇಸ್ಲಾಮಾಬಾದ್ ಭಾರತೀಯ ಹೈಕಮಿಷನ್‌ನಿಂದ ಇಬ್ಬರು ಭಾರತೀಯ ಅಧಿಕಾರಿಗಳನ್ನು ಅಪಹರಿಸಿ ಕಿರುಕುಳ ನೀಡಲಾಗಿತ್ತು. ಅಲ್ಲದೇ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ವೇಳೆ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಇಬ್ಬರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ