
ನವದೆಹಲಿ(ಜು.25): ಭಾರತದೊಂದಿಗೆ ಗಡಿ ಹೊಂದಿಕೊಂಡಿರುವ ಯಾವುದೇ ದೇಶದಿಂದ ದೇಶದ ಯಾವುದೇ ಸರ್ಕಾರಿ ಸ್ವಾಮ್ಯದ ಕಂಪನಿಗಳು ಯಾವುದೇ ವಸ್ತು ಅಥವಾ ಸೇವೆಯನ್ನು ಪಡೆಯುವುದನ್ನು ನಿಷೇಧಿಸಿ ಭಾರತ ಸರ್ಕಾರ ಹೊರಡಿಸಿದೆ. ಸಾಮಾನ್ಯ ಹಣಕಾಸು ಕಾಯ್ದೆ 2017ಕ್ಕೆ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ತಡರಾತ್ರಿ ಆದೇಶ ಹೊರಡಿಸಿದೆ.
ರಹಸ್ಯ ಕಾದಿಡಲು ಇನ್ನಷ್ಟು ಚೀನಾ ರಾಯಭಾರ ಕಚೇರಿ ಬಂದ್: ಟ್ರಂಪ್
ಆದೇಶದಲ್ಲಿ ಯಾವುದೇ ದೇಶಗಳ ಹೆಸರು ಹೇಳದೇ ಇದ್ದರೂ, ಅದು ನೇರವಾಗಿ ಚೀನಾ ದೇಶದ ಕಂಪನಿಗಳು ಭಾರತಕ್ಕೆ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ತಡೆಯುವ ಉದ್ದೇಶ ಹೊಂದಿದೆ ಎನ್ನಲಾಗಿದೆ.
ಅದರೆ ಈ ತಿದ್ದುಪಡಿಯಲ್ಲಿ ಕೆಲವೊಂದು ವಿನಾಯ್ತಿ ನೀಡಲಾಗಿದೆ. ವೈದ್ಯಕೀಯ ಸಾಮಗ್ರಿಗಳು ಆಮದಿಗೆ ಪೂರ್ಣ ವಿನಾಯ್ತಿ ನೀಡಲಾಗಿದೆ. ಜೊತೆಗೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಮಂಡಳಿಯಲ್ಲಿ ನೊಂದಾಯಿತ ಕಂಪನಿಗಳಿಗೆ ರಫ್ತು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ