
ನವದೆಹಲಿ: ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಮೇ 12ರಂದು ಮಾತುಕತೆಗೆ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ. ರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ ಅವರು ಸಹ ಟ್ರಂಪ್ ಟ್ವೀಟ್‌ನ್ನ ರೀ ಟ್ವೀಟ್ ಮಾಡಿದ್ದಾರೆ.
ಇಂದು ಮಧ್ಯಾಹ್ನ ಪಾಕಿಸ್ತಾನದ ಡಿಜಿಎಂಒ ಅವರೇ ಮೊದಲುಉ ಫೋನ್ ಕರೆ ಮಾಡಿದರು. ತದನಂತರ ಚರ್ಚೆಗಳು ನಡೆದು ಒಮ್ಮತಕ್ಕೆ ಬರಲಾಯಿತು. ಬೇರೆ ಯಾವುದೇ ಸ್ಥಳದಲ್ಲಿ ಬೇರೆ ಯಾವುದೇ ವಿಷಯದ ಕುರಿತು ಮಾತುಕತೆ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ DGMO ಅವರಿಗೆ ಕರೆ ಮಾಡಿದರು. ಭಾರತೀಯ ಸಮಯ 5:00 ರಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಎರಡೂ ಕಡೆಯವರು ಒಪ್ಪಿಕೊಂಡರು. ಇಂದು ಈ ಒಪ್ಪಂದವನ್ನು ಜಾರಿಗೆ ತರಲು ಎರಡೂ ಕಡೆಯವರಿಗೆ ಸೂಚಿಸಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12:00 ಕ್ಕೆ ಮತ್ತೆ ಮಾತನಾಡಲಿದ್ದಾರೆ ಎಂದು ವಿಕ್ರಂ ಮಿಸ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಸಂಜೆ 5:00 ಗಂಟೆಯ ನಂತರ, ಭೂ ಸೇನೆ, ವಾಯು ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಎರಡೂ ಕಡೆಯವರು ಒಪ್ಪಿಕೊಂಡರು. ಇಂದು ಈ ಒಪ್ಪಂದವನ್ನು ಜಾರಿಗೆ ತರಲು ಎರಡೂ ಕಡೆಯವರಿಗೆ ಸೂಚಿಸಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12:00 ಕ್ಕೆ ಮತ್ತೆ ಮಾತನಾಡಲಿದ್ದಾರೆ ಎಂದು ವಿಕ್ರಂ ಮಿಸ್ರಿ ತಿಳಿಸಿದ್ದಾರೆ.
ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ
ಕದನ ವಿರಾಮದ ಕುರಿತು ಭಾರತದ ವಿದೇಶಾಂಗ ಸಚಿವ ಜೈ ಶಂಕರ್ ಸಹ ಎಕ್ಸ್ ಖಾತೆ ಮೂಲಕ ಪ್ರತಿಕ್ರಿಯಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ