
ನವದೆಹಲಿ(ಜು.25): ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಮಧ್ಯೆಯೇ ಕೊರೋನಾ ಮರಣ ಪ್ರಮಾಣ ಶೇ.2.38ಕ್ಕೆ ಇಳಿಕೆ ಆಗಿದೆ.
"
ಮೇನಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ.3.2ರಷ್ಟಿತ್ತು. ಜು.10ರಂದು ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ.2.72ಕ್ಕೆ ಇಳಿಕೆ ಆಗಿತ್ತು. ನಂತರ ಮತ್ತಷ್ಟುಇಳಿಕೆ ಕಂಡು ಜು.20ರಂದು ಶೇ.2.49ಕ್ಕೆ ಕುಸಿದಿತ್ತು. ಇದೀಗ ಮರಣ ಪ್ರಮಣ ಮತ್ತುಷ್ಟುಇಳಿಕೆ ಕಂಡಿರುವುದು ಆಶಾವಾದ ಮೂಡಿಸಿದೆ.
ವೈದ್ಯ ಗಿರಿಧರ್ ಕಜೆ ಬಳಿ ಆಯುರ್ವೇದ ಮೆಡಿಸಿನ್ ತೆಗೆದುಕೊಂಡೆ: ಕೊರೋನಾ ಗೆದ್ದ ಸಚಿವ ಸಿ. ಟಿ. ರವಿ!
ಇದೇ ವೇಳೆ ಕೊರೋನಾದಿಂದ ಗುಣಮುಖರಾದವರ ಪ್ರಮಾಣ ದೇಶದಲ್ಲಿ ಶೇ. 63.45ಕ್ಕೆ ಏರಿಕೆ ಆಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಈ ವರೆಗೆ ಒಟ್ಟು 8,17,208 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 4,40,135 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಪ್ರಕರಣಗಳ ಸಂಖ್ಯೆ 12.87 ಲಕ್ಷಕ್ಕೆ ಏರಿಕೆ ಆಗಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ 11,179 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 897 ಸರ್ಕಾರಿ ಮತ್ತು 393 ಖಾಸಗಿ ಪ್ರಯೋಗಾಲಯಗಳಲ್ಲಿ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ