
ನವದೆಹಲಿ(ಜೂ.29): ಭಾರತದಲ್ಲಿ ಡೆಲ್ಟಾ ಪ್ಲಸ್ ವೇರಿಯೆಂಟ್, 3ನೇ ಅಲೆ ಭೀತಿ ನಡುವೆ ಕೋವಿಡ್ ಪ್ರಕರಣ ಸಂಖ್ಯೆ ಇಳಿಮುಖವಾಗುತ್ತಿದೆ. 2ನೇ ಅಲೆ ಅಬ್ಬರ ಕಡಿಮೆಯಾಗಿದೆ. ಇದೀಗ ಬರೊಬ್ಬರಿ 102 ದಿನಗಳ ಬಳಿಕ ಭಾರತದ ಹೊಸ ಕೊರೋನಾ ಪ್ರಕರಣ ಸಂಖ್ಯೆ 40 ಸಾವಿರಕ್ಕಿಂತ ಕೆಳಕ್ಕಿಳಿದಿದೆ.
ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 37,566 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡ 1.82ರಷ್ಟಿದೆ. ಇನ್ನು ಕೊರೋನಾ ಚೇತರಿಕೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿರುವುದು ಸಮಾಧಾನ ತಂದಿದೆ.
ದೇಶದಲ್ಲಿ ಇಲ್ಲಿಯ ತನಕ 2,93,66,601 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 56,994 ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಸತತ 47ನೇ ದಿನದಲ್ಲೂ ಪ್ರತಿ ದಿನದ ಚೇತರಿಕೆ ಪ್ರಮಾಣ ಹೊಸ ಪ್ರಕರಣ ಸಂಖ್ಯೆಗಿಂತ ಹೆಚ್ಚಿದೆ. ಸದ್ಯ ಭಾರತದ ಕೊರೋನಾ ಚೇತರಿಕೆ ಪ್ರಮಾಣ 96.87%ಕ್ಕೆ ಏರಿಕೆಯಾಗಿದೆ.
ಕೋವಿಡ್‌ಗೆ ಮೃತಪಟ್ಟವರಲ್ಲಿ 50 ವರ್ಷದೊಳಗಿನವರೆ ಹೆಚ್ಚು; AIIMS ಅಧ್ಯಯನ ವರದಿ ...
ಕಳೆದೊಂದು ವಾರದಿಂದ ಕೊರೋನಾ ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತ ಕೆಳಗಿಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸಹ ಸತತ 22ನೇ ದಿನದಲ್ಲಿ 5% ಮಟ್ಟದಿಂದ ಕೆಳಗಿದ್ದು, ಅದೀಗ 2.12%ಗೆ ಕುಸಿದಿದೆ. ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದ್ದು, ಇದುವರೆಗೆ 40.81 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
ಲಸಿಕಾ ಅಭಿಯಾನ ಮತ್ತಷ್ಟು ಚುರಕುಗೊಂಡಿದೆ. ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರಂತರ ಲಸಿಕೆ ಪೂರೈಕೆ ಮಾಡುತ್ತಿದೆ. ಇದುವರೆಗೆ 32.90 ಕೋಟಿ ಲಸಿಕೆ ಡೋಸ್ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ