59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ!  59 ವರ್ಷದ ಬಳಿಕ ಭಾರತ ನಿರಾಳ!

59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!

Published : Apr 01, 2026, 02:35 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ, ನಕ್ಸಲರ ಕೇಂದ್ರೀಯ ಸಮಿತಿ ಮತ್ತು ಕಾರ್ಯಪಡೆ ಬಹುತೇಕ ನಿರ್ನಾಮವಾಗಿದ್ದು, 59 ವರ್ಷಗಳ ಬಳಿಕ ದೇಶ ನಕ್ಸಲ್ ಮುಕ್ತವಾಗಿದೆ ಎಂದು ಲೋಕಸಭೆಯಲ್ಲಿ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ ಎಂದು ಅವರು ಬಣ್ಣಿಸಿದ್ದಾರೆ.

‘ನಕ್ಸಲರ ಕೇಂದ್ರೀಯ ಸಮಿತಿ ಮತ್ತು ನಕ್ಸಲರ ಪ್ರಮುಖ ಕಾರ್ಯಪಡೆ ಬಹುತೇಕ ನಿರ್ನಾಮವಾಗುವುದರೊಂದಿಗೆ 59 ವರ್ಷಗಳ ಬಳಿಕ ದೇಶ ನಕ್ಸಲ್‌ ಮುಕ್ತವಾಗಿ ಹೊರಹೊಮ್ಮಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಹತ್ವದ ಘೋಷಣೆ ಮಾಡಿದ್ದಾರೆ.

ದೇಶವನ್ನು 2026ರ ಮಾ.31ರೊಳಗೆ ನಕ್ಸಲ್ ಮುಕ್ತ ಮಾಡುವ ಮಾಡುವ ಕುರಿತು ಕಳೆದ ವರ್ಷ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಮುನ್ನಾ ದಿನ ಅವರು ಲೋಕಸಭೆಯಲ್ಲಿ ಸೋಮವಾರ ಇಂಥದ್ದೊಂದು ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಜೊತೆಗೆ, ‘ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ’ ಎಂದು ಬಣ್ಣಿಸಿದ್ದಾರೆ.

‘ದಶಕಗಳಿಂದ ನಕ್ಸಲ್ ಹಿಂಸಾಚಾರಕ್ಕೆ ತುತ್ತಾಗಿದ್ದ ಭಾರತ ಕೊನೆಗೂ ಆ ಆತಂಕದಿಂದ ಹೊರಬಂದಿದೆ. ದೇಶದಲ್ಲಿ ನಕ್ಸಲರ ಅತ್ಯಂತ ಭದ್ರ ಎಂಬ ಕುಖ್ಯಾತಿ ಹೊಂದಿದ್ದ ಮತ್ತು ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭದ ಬಳಿಕ ಕೆಂಪು ಉಗ್ರರ ಕೊನೆಯ ಭದ್ರಕೋಟೆಯಾಗಿದ್ದ ಛತ್ತೀಸ್‌ಗಢದ ಬಸ್ತರ್‌ ವಲಯ ಕೂಡಾ ಬಹುತೇಕ ನಕ್ಸಲ್‌ ಮುಕ್ತವಾಗಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ನಕ್ಸಲ್ ಮುಕ್ತ:

ದೇಶವನ್ನು ಎಡಪಂಥೀಯ ಉಗ್ರವಾದದಿಂದ ಮುಕ್ತಗೊಳಿಸುವ ಯತ್ನಗಳ ಬಗ್ಗೆ ಸೋಮವಾರ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ, ‘ಕಾನೂನು ಇಲ್ಲದೆ 12 ರಾಜ್ಯಗಳು ಕೆಂಪು ಕಾರಿಡಾರ್‌ (ನಕ್ಸಲ್‌ ಪ್ರದೇಶ) ಆಗಿದ್ದವು. ಪರಿಣಾಮ ಈ ರಾಜ್ಯಗಳಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯದೇ 12 ಕೋಟಿ ಜನರು ಯಾವುದೇ ಹಲವು ವರ್ಷ ಬಡತನದಲ್ಲಿ ಬದುಕುತ್ತಿದ್ದರು. ನಕ್ಸಲರ ಕ್ರೌರ್ಯಕ್ಕೆ 5,000 ಭದ್ರತಾ ಸಿಬ್ಬಂದಿ ಸೇರಿದಂತೆ 20,000 ಜನ ಬಲಿಯಾಗಿದ್ದಾರೆ’ ಎಂದು ಅಂಕಿಅಂಶಗಳನ್ನು ನೀಡಿದರು.

ಜತೆಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿ, ‘ನಮ್ಮ ಸರ್ಕಾರವು ಆದಿವಾಸಿಗಳ ಅಭಿವೃದ್ಧಿ ಮಾಡುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಯಾವುದೇ ರೀತಿಯ ಹಿಂಸೆಯನ್ನು ಸಹಿಸುವುದಿಲ್ಲ. ಅದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ. ನಕ್ಸಲ್‌ ಮುಕ್ತ ಭಾರತವೇ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ ಹಾಗೂ ಇದನ್ನು ಎಲ್ಲಾ ಸಂಶೋಧನಾಕಾರರು ಒಪ್ಪುತ್ತಾರೆ’ ಎಂದು ಶಾ ಹೇಳಿದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more