
ನವದೆಹಲಿ(ಆ.15): ಕೊರೋನಾ ವೈರಸ್‌ಗೆ ಭಾರತದಲ್ಲಿ ಸಿದ್ಧವಾಗುತ್ತಿರುವ ಸ್ವದೇಶಿ ಲಸಿಕೆ ಕೋವ್ಯಾಕ್ಸಿನ್ ಮೊದಲ ಹಂತದ ಕ್ಲಿನಿಕಲ್ ಪ್ರಯೋಗದಲ್ಲಿ ಬಹುತೇಕ ಯಶಸ್ವಿಯಾಗಿದೆ. ಕರ್ನಾಟಕದ ಬೆಳಗಾವಿ ಆಸ್ಪತ್ರೆಯೂ ಸೇರಿದಂತೆ ದೇಶದ 12 ಆಸ್ಪತ್ರೆಗಳಲ್ಲಿ ಇದರ ಪ್ರಯೋಗ ನಡೆಯುತ್ತಿದ್ದು, ಲಸಿಕೆ ತೆಗೆದುಕೊಂಡವರಲ್ಲಿ ಯಾವುದೇ ಅಡ್ಡಪರಿಣಾಮ ಕಂಡುಬಂದಿಲ್ಲ ಎಂದು ಮೂಲಗಳು ಹೇಳಿವೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯ ಪುಡಿ ಮಾರುಕಟ್ಟೆಗೆ
ಭಾರತ್ ಬಯೋಟೆಕ್ ಎಂಬ ಔಷಧ ಸಂಶೋಧನಾ ಕಂಪನಿಯ ಜೊತೆ ಸೇರಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಮೊದಲ ಹಂತದಲ್ಲಿ ಇದರ ಸುರಕ್ಷತೆಯನ್ನು ಪರೀಕ್ಷಿಸಲಾಗುತ್ತಿದ್ದು 375 ಜನರಿಗೆ ನೀಡಲಾಗಿದೆ. ಅವರೆಲ್ಲ ಸುರಕ್ಷಿತವಾಗಿದ್ದಾರೆ. ಈಗ ಅವರ ರಕ್ತದ ಮಾದರಿ ಸಂಗ್ರಹಿಸಿ ಅವರಲ್ಲಿ ರೋಗನಿರೋಧಕ ಶಕ್ತಿ ಬೆಳೆದಿದೆಯೇ ಎಂಬುದನ್ನು ಎರಡನೇ ಹಂತದಲ್ಲಿ ಪರೀಕ್ಷಿಸಲು ಸಿದ್ಧತೆ ಆರಂಭವಾಗಿದೆ. ಮುಂದಿನ ತಿಂಗಳು ಎರಡನೇ ಹಂತದ ಪರೀಕ್ಷೆ ನಡೆಯಲಿದ್ದು, ನಂತರ ಮೂರನೇ ಹಂತದ ಪರೀಕ್ಷೆಯಲ್ಲೂ ಲಸಿಕೆ ಯಶಸ್ವಿಯಾದರೆ 2021ರ ಮೊದಲಾರ್ಧದಲ್ಲಿ ಲಸಿಕೆ ಬಿಡುಗಡೆಯಾಗಬಹುದು ಎಂದು ವರದಿಗಳು ಹೇಳಿವೆ. ಸದ್ಯದಲ್ಲೇ ಮೊದಲ ಹಂತದ ಪರೀಕ್ಷಾ ವರದಿಯನ್ನು ಆರೋಗ್ಯ ಸಚಿವಾಲಯಕ್ಕೆ ಸಲ್ಲಿಸಲಾಗುತ್ತದೆ.
ಸೋಂಕು ಇಲ್ಲದಿದ್ದರೂ ಮನೆ ಸೀಲ್ ಡೌನ್ : ಇದೆಂತಾ ವ್ಯವಸ್ಥೆ ?
ಭಾರತದಲ್ಲಿ 3 ಕೊರೋನಾ ಲಸಿಕೆ:
ದೇಶದಲ್ಲಿ ಪ್ರಮುಖವಾಗಿ ಮೂರು ಲಸಿಕೆಗಳು ಬೇರೆ ಬೇರೆ ಹಂತದಲ್ಲಿ ಪರೀಕ್ಷೆಗೆ ಒಳಪಡುತ್ತಿವೆ. ಅವು - ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್, ಜೈಡಸ್ ಕ್ಯಾಡಿಲಾ ಕಂಪನಿಯ ಜೈಕೋವ್-ಡಿ ಮತ್ತು ಆಕ್ಸ್‌ಫರ್ಡ್/ಆಸ್ಟ್ರಾಜೆನೆಕಾ ಕಂಪನಿಯ ಕೋವಿಶೀಲ್ಡ್. ಮೂರನೇ ಲಸಿಕೆಯನ್ನು ಪುಣೆಯಲ್ಲಿರುವ ಜಗತ್ತಿನ ಅತಿದೊಡ್ಡ ಲಸಿಕೆ ಉತ್ಪಾದನಾ ಘಟಕದಲ್ಲಿ ಈಗಾಗಲೇ ಉತ್ಪಾದಿಸಲಾಗುತ್ತಿದೆ. ಈ ಲಸಿಕೆಯ 2, 3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಈಗಾಗಲೇ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರವು ಸೆರಂ ಕಂಪನಿಗೆ ಅನುಮತಿಯನ್ನೂ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ