Vaccination In India: ಮಕ್ಕಳಿಗೆ, ವಯಸ್ಕರಿಗೆ ನೀಡಲು ಬೇಕು 20 ಕೋಟಿ ಡೋಸ್‌ ಲಸಿಕೆ!

Published : Dec 27, 2021, 02:05 AM IST
Vaccination In India: ಮಕ್ಕಳಿಗೆ, ವಯಸ್ಕರಿಗೆ ನೀಡಲು ಬೇಕು 20 ಕೋಟಿ ಡೋಸ್‌ ಲಸಿಕೆ!

ಸಾರಾಂಶ

* ಮಕ್ಕಳಿಗೆ, ವಯಸ್ಕರಿಗೆ ನೀಡಲು ಬೇಕು 20 ಕೋಟಿ ಡೋಸ್‌ ಲಸಿಕೆ * ಕೇಂದ್ರ ಸರ್ಕಾರದ ಹೊಸ ಘೋಷಣೆ ಹಿನ್ನೆಲೆ

ನವದೆಹಲಿ(ಡಿ.27): 15-18ರ ವಯೋಮಾನದ ಮಕ್ಕಳಿಗೆ ಲಸಿಕೆ, ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು ವಯೋವೃದ್ಧರಿಗೆ ಬೂಸ್ಟರ್‌ ಡೋಸ್‌ ಕೋವಿಡ್‌ ಲಸಿಕೆ ನೀಡುವ ಕೇಂದ್ರದ ನಿರ್ಧಾರದಿಂದಾಗಿ ಹೆಚ್ಚುವರಿ 20 ಕೋಟಿ ಡೋಸ್‌ ಲಸಿಕೆ ಅಗತ್ಯ ಬೀಳಲಿದೆ.

2011ರ ಜನಗಣತಿಯ ಪ್ರಕಾರ ಭಾರತದಲ್ಲಿ ಒಟ್ಟು 7.4 ಕೋಟಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿದ್ದಾರೆ. 13.79 ಕೋಟಿ 60 ವರ್ಷ ಮೇಲ್ಪಟ್ಟವಯಸ್ಕರಿದ್ದಾರೆ. ಈ ಪೈಕಿ ಶೇ.75ರಷ್ಟುಜನರು ನಾನಾ ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಕುಟುಂಬ ಹಾಗೂ ಆರೋಗ್ಯ ಕಲ್ಯಾಣ ಸಚಿವಾಲಯದ ವರದಿ ಹೇಳಿದೆ. ಅಂದರೆ 13.79 ಕೋಟಿ ಜನರ ಪೈಕಿ 10 ಕೋಟಿ ಜನರು ಬೂಸ್ಟರ್‌ ಡೋಸ್‌ ಪಡೆಯುವ ಅರ್ಹತೆ ಪಡೆಯುತ್ತಾರೆ. ಇವರ ಜೊತೆ 1 ಕೋಟಿ ಆರೋಗ್ಯ ಕಾರ್ಯಕರ್ತರು, 2 ಕೋಟಿ ಮುಂಚೂಣಿ ಕಾರ್ಯಕರ್ತರು ಇದ್ದಾರೆ. ಹೀಗಾಗಿ 20 ಕೋಟಿಗಿಂತ ಹೆಚ್ಚಿನ ಡೋಸ್‌ ಹೆಚ್ಚುವರಿ ಡೋಸ್‌ ಲಸಿಕೆ ಬೇಕಾಗಿ ಬರಲಿದೆ.

ಕೋವ್ಯಾಕ್ಸಿನ್‌ಗೆ ಮಾನ್ಯತೆ ತಡೆಗೆ ಜಾಗತಿಕ ಮಟ್ಟದ ಸಂಚು: ಸಿಜೆಐ

ಭಾರತದಲ್ಲೇ ಸಂಶೋಧಿಸಲ್ಪಟ್ಟಕೋವಿಡ್‌-19ರ ಲಸಿಕೆ ಕೋವ್ಯಾಕ್ಸಿನ್‌ ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದುಕೊಳ್ಳುವುದನ್ನು ತಡೆಯಲು ಜಾಗತಿಕ ಮಟ್ಟದಲ್ಲಿ ಸಂಚು ನಡೆದಿತ್ತು ಎಂಬ ವಿಚಾರವನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಬಹಿರಂಗ ಪಡೆಸಿದ್ದಾರೆ.

ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಫೈಝರ್‌ನಂತಹ ಹಲವು ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕೆಲ ಸ್ಥಳೀಯರೂ ಸೇರಿ ಕೋವಾಕ್ಸಿನ್‌ ವಿರುದ್ಧ ಅಪಪ್ರಚಾರ ನಡೆಸಿದ್ದರು. ಡಬ್ಲ್ಯುಎಚ್‌ಒಗೆ ದೂರು ನೀಡಿ ಭಾರತದಲ್ಲೇ ನಿರ್ಮಾಣವಾದ ವ್ಯಾಕ್ಸಿನ್‌ಗೆ ಜಾಗತಿಕ ಮನ್ನಣೆ ನೀಡುವುದನ್ನು ತಪ್ಪಿಸಲು ಯತ್ನಿಸಿದ್ದರು ಎಂದಿದ್ದಾರೆ.

ಭಾರತ್‌ ಬಯೋಟೆಕ್‌ನ ಸ್ಥಾಪಕ ಕೃಷ್ಣ ಎಲ್ಲಾ ಹಾಗೂ ಅವರ ಪತ್ನಿ ಸುಚಿತ್ರಾ ಅವರು ಈ ಸಮಯದಲ್ಲಿ ಭಾರೀ ಸವಾಲುಗಳನ್ನು ಎದುರಿಸಬೇಕಾಯಿತು. ಆದರೆ ಇವರ ಸತತ ಪ್ರಯತ್ನದಿಂದಾಗಿ ಭಾರತಕ್ಕೆ ಲಸಿಕೆ ತಯಾರಿಕೆಯಲ್ಲಿ ವಿಶ್ವಮಟ್ಟದಲ್ಲಿ ಖ್ಯಾತಿ ಲಭಿಸಿದೆ ಎಂದರು.

ಬೂಸ್ಟರ್‌ ಡೋಸ್‌ ನಡುವೆ 9-12 ತಿಂಗಳ ಅಂತರ

 

60 ವರ್ಷ ಮೇಲ್ಪಟ್ಟಪೂರ್ವರೋಗ ಪೀಡಿತರು ಹಾಗೂ ವೈದ್ಯರಂಥ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್‌ (ಬೂಸ್ಟರ್‌ ಡೋಸ್‌) ಲಸಿಕೆ ವಿತರಣೆಯನ್ನು ಜ.10ರಿಂದ ಆರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ, ಲಸಿಕೆಯ ಅಂತರದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ಆರಂಭವಾಗಿದೆ.

2ನೇ ಡೋಸ್‌ ಪಡೆದ 9ರಿಂದ 12 ತಿಂಗಳಲ್ಲಿ ಬೂಸ್ಟರ್‌ ಡೋಸ್‌ ಪಡೆಯಬೇಕು ಎಂದು ಕೇಂದ್ರ ಸರ್ಕಾರದ ‘ರಾಷ್ಟ್ರೀಯ ಲಸಿಕಾಕರಣ ತಾಂತ್ರಿಕ ಸಲಹಾ ಸಮಿತಿ’ (ಎನ್‌ಟಿಎಜಿಐ) ತಜ್ಞರು ಗಂಭೀರ ಸಮಾಲೋಚನೆಯಲ್ಲಿ ತೊಡಗಿದ್ದಾರೆ. ಶೀಘ್ರ ಈ ಬಗ್ಗೆ ಘೋಷಣೆ ಹೊರಬೀಳಲಿದೆ ಎಂದು ಮೂಲಗಳು ಹೇಳಿವೆ.

ಬೂಸ್ಟರ್‌ ಲಸಿಕೆ?:

ಜ.10ರಿಂದ ಆರಂಭವಾಗಲಿರುವ ಬೂಸ್ಟರ್‌ ಡೋಸ್‌ ನೀಡಿಕೆ ವೇಳೆ ಈಗಾಗಲೇ ಭಾರತದಲ್ಲಿ ಹೆಚ್ಚಾಗಿ ನೀಡಿರುವ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ ಬದಲಿಗೆ ಎಂಆರ್‌ಎನ್‌ಎ ತಂತ್ರಜ್ಞಾನ ಆಧರಿತ ಲಸಿಕೆ ನೀಡುವುದು ಸೂಕ್ತ ಎಂದು ಹಲವು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಆದರೆ ಇದಕ್ಕಾಗಿ ಬೇರೆ ಲಸಿಕೆಗಳ ಮೊರೆ ಹೋಗುವ ಬದಲು ಈಗಾಗಲೇ ವಿಶ್ವಾಸಾರ್ಹತೆ ಪಡೆದುಕೊಂಡಿರುವ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಸಿಕೆಯನ್ನೇ ಬೂಸ್ಟರ್‌ ಡೋಸ್‌ ಆಗಿ ನೀಡಲು ಸರ್ಕಾರ ಒಲವು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ