
ನವದೆಹಲಿ(ಜೂ.19): ದೇಶದಲ್ಲಿ ಈಗ 27,142 ಸಕ್ರಿಯ ಬ್ಲ್ಯಾಕ್ ಫಂಗಸ್ ಪ್ರಕರಣಗಳಿವೆ ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಮನಸುಖ್ ಮಾಂಡವೀಯ ಶುಕ್ರವಾರ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಚಿಕಿತ್ಸೆಗೆ ಬೇಕಾದ ಆ್ಯಂಫೋಟೆರಿಸಿನ್ ಬಿ ಲಭ್ಯತೆಯನ್ನು ಹೆಚ್ಚಿಸಲಾಗುತ್ತಿದೆ. ಈಗಾಗಲೇ ಇದರ ಉತ್ಪಾದನೆಯನ್ನು ದೇಶದಲ್ಲಿ 5 ಪಟ್ಟು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್‌ನಲ್ಲಿ ಇದರ ಉತ್ಪಾದನೆ ಕೇವಲ 62 ಸಾವಿರ ವಯಲ್‌ಗಳಾಗಿದ್ದವು. ಜೂನ್ ವೇಳೆಗೆ ಅದನ್ನು 3.75 ಲಕ್ಷ ವಯಲ್‌ಗೆ ಹೆಚ್ಚಿಸಲಾಗಿದೆ. ಈ ಔಷಧಿಯ ಲಭ್ಯತೆ ಯಾವತ್ತೂ ಕೊರತೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಅವರು ಸಷ್ಟಪಡಿಸಿದ್ದಾರೆ.
ಈಗಾಗಲೇ ಔಷಧ ಇಲಾಖೆಯು 7,28,045 ಆ್ಯಂಫೋಟೆರಿಸಿನ್ ವಯಲ್‌ಗಳನ್ನು ಜೂ.17ರವರೆಗೆ ರಾಜ್ಯಗಳಿಗೆ ಹಾಗೂ ಕೇಂದ್ರೀಯ ಆಸ್ಪತ್ರೆಗಳಿಗೆ ಕಳಿಸಿಕೊಟ್ಟಿದೆ ಎಂದು ಸಚಿವರು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ