ನವದೆಹಲಿ(ಮೇ.31): ಲಡಾಖ್ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಹಾಗೂ ಚೀನಾ ಪರಸ್ಪರ ಮಾತುಕತೆಯಲ್ಲಿ ತೊಡಗಿವೆ. ರಾಜತಾಂತ್ರಿಕ ಹಾಗೂ ಸೇನಾ ಮಟ್ಟಗಳೆರಡರಲ್ಲೂ ಮಾತುಕತೆ ನಡೆದಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ. ತನ್ಮೂಲಕ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಮೊದಲ ಕೇಂದ್ರ ಸಚಿವರಾಗಿದ್ದಾರೆ.
ಶನಿವಾರ ಟೀವಿ ಚಾನೆಲ್ ಒಂದರ ಜತೆ ಮಾತನಾಡಿದ ಅವರು, ‘ಎರಡೂ ದೇಶಗಳು ಸಮಸ್ಯೆ ಇತ್ಯರ್ಥಕ್ಕೆ ಬಯಸಿದ್ದಾಗಿ ಈಗಾಗಲೇ ಸ್ಪಷ್ಟಪಡಿಸಿ ಅಗಿದೆ. ಈ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಯಾವುದೇ ಹಂತದಲ್ಲೂ ಭಾರತದ ಗೌರವಕ್ಕೆ ಧಕ್ಕೆಯಾಗಲು ಬಿಡುವುದಿಲ್ಲ. ರಾಜತಾಂತ್ರಿಕ ಹಾಗೂ ಸೇನಾ ಮಾರ್ಗಗಳ ಮೂಲಕ ಮಾತುಕತೆ ನಡೆಯುತ್ತಿದೆ. ಅಮೆರಿಕ ರಕ್ಷಣಾ ಸಚಿವ ಮಾರ್ಕ್ ಎಸ್ಪರ್ ಜತೆ ಶುಕ್ರವಾರ ಸಂಜೆ ನಾನು ಮಾತನಾಡುವಾಗಲೂ ಈ ವಿಷಯ ತಿಳಿಸಿದ್ದೇನೆ’ ಎಂದು ಹೇಳಿದರು.
ಲೇಹ್‌ದೆ ಮೋದಿ ಭೇಟಿ, ರೂವಾರಿ ಧೋವಲ್
ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ‘ಭಾರತ-ಚೀನಾ ಬಿಕ್ಕಟ್ಟು ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ನಾನು ಸಿದ್ಧ’ ಎಂದಿದ್ದರು. ಈ ಹಿನ್ನೆಲೆಯಲ್ಲಿ ರಾಜನಾಥ್ ಹೇಳಿಕೆ ಮಹತ್ವ ಪಡೆದಿದೆ. ಟ್ರಂಪ್ ಮಧ್ಯಸ್ಥಿಕೆ ಆಹ್ವಾನವನ್ನು ಚೀನಾ ಈಗಾಗಲೇ ತಿರಸ್ಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ