
ನವದೆಹಲಿ: ಜೈಲುಶಿಕ್ಷೆ ಅನುಭವಿಸಿದ ನಂತರ ತನ್ನ ಗಡೀಪಾರು ಪ್ರಶ್ನಿಸಿ ಭಾರತದಲ್ಲೇ ಆಶ್ರಯ ಕೋರಿದ್ದ ಶ್ರೀಲಂಕಾ ಪ್ರಜೆಯೊಬ್ಬನ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅಲ್ಲದೆ, ಭಾರತವು ಪ್ರಪಂಚದಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ನೀಡಲು ಇರುವ ಧರ್ಮಶಾಲೆಯಲ್ಲ ಎಂದು ಕಟುವಾಗಿ ನುಡಿದಿದೆ.
ಶ್ರೀಲಂಕಾ ಪ್ರಜೆಯಾಗಿರುವ ಅರ್ಜಿದಾರ, ಲಂಕೆಯ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಸಂಘಟನೆಯೊಂದಿಗೆ ಗುರುತಿಸಿಕೊಂಡು 2015ರಲ್ಲಿ ಭಾರತದಲ್ಲಿ ಬಂಧನಕ್ಕೊಳಗಾಗಿದ್ದ. 2018ರಲ್ಲಿ ವಿಚಾರಣಾ ನ್ಯಾಯಾಲಯವು ಆತನನ್ನು ದೋಷಿ ಎಂದು ಘೋಷಿಸಿ 10 ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. 2022ರಲ್ಲಿ, ಮದ್ರಾಸ್ ಹೈಕೋರ್ಟ್ ಶಿಕ್ಷೆಯನ್ನು 7 ವರ್ಷಗಳಿಗೆ ಕಡಿತಗೊಳಿಸಿ, ಶಿಕ್ಷೆ ಮುಗಿದ ತಕ್ಷಣ ದೇಶ ತೊರೆಯುವಂತೆ ಆದೇಶಿಸಿತ್ತು. ಆದರೆ ಶಿಕ್ಷೆ ಮುಗಿದ ಬಳಿಕ, ಶ್ರೀಲಂಕಾದಲ್ಲಿ ತನಗೆ ಜೀವ ಬೆದರಿಕೆ ಇದೆ ಎಂಬ ನೆಪವೊಡ್ಡಿ ಭಾರತ ತೊರೆಯಲು ನಿರಾಕರಿಸಿದ್ದ.
ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ, ‘ನಾವು ಭಾರತದಲ್ಲಿರುವ 140 ಕೋಟಿ ಜನಸಂಖ್ಯೆಯೊಂದಿಗೆ ಕಷ್ಟಪಡುತ್ತಿದ್ದೇವೆ. ಇದು ಎಲ್ಲೆಡೆಯಿಂದ ಬರುವ ವಿದೇಶಿ ಪ್ರಜೆಗಳಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ. ಇಲ್ಲಿ ನೆಲೆಸಲು ನಿಮಗೆ ಯಾವ ಹಕ್ಕಿದೆ?’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.
ಏನಿದು ಪ್ರಕರಣ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ