ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸಿರುವ ನಡುವೆಯೇ ಮತ್ತೊಂದು ಅಕ್ರಮದ ಶಂಕೆ ವ್ಯಕ್ತವಾಗಿದ್ದು, ಪಡೆ ಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರ, ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ದಳ( ವಿಎಸಿಬಿ)ಯ ಗುಪ್ತಚರ ವಿಭಾಗ ಬಹಿರಂಗ ಪಡಿಸಿದೆ. ಪವಿತ್ರ ಪಡಿಪೂಜೆಯ ಬುಕ್ಕಿಂಗ್, ಭಕ್ತರಿಗೆ ಟಿಕೆಟ್ ವಿತರಣೆಯಲ್ಲಿ ನಿಗದಿಗಿಂತ ಹಲವು ಪಟ್ಟು ಹೆಚ್ಚು ದರಕ್ಕೆ ಮಾರಾಟ, ಹಣ ನೀಡಿದವರಿಗೆ ಪೂಜೆಯಲ್ಲಿ ಆದ್ಯತೆ ಸೇರಿದಂತೆ ಅನೇಕ ಅಕ್ರಮ ನಡೆದಿರುವ ಸಾಧ್ಯತೆ ಬಗ್ಗೆ ವರದಿ ಮಾಡಿದೆ. ಮಾತ್ರವಲ್ಲದೇ ತಿರುವಾಂಕೂರು ದೇವಸ್ವಂ ಮಂಡಳಿ( ಟಿಡಿಬಿ) ಸಿಬ್ಬಂದಿ ಮತ್ತು ಇತರ ಏಜೆಂಟ್‌ಗಳು ಇದರಲ್ಲಿ ಭಾಗಿದಾರರು ಎಂದು ಉಲ್ಲೇಖಿಸಿದೆ.

09:45 AM (IST) Jan 18
ಐಸಿಸಿ ಅಂಡರ್-19 ವಿಶ್ವಕಪ್‌ನ ಮಳೆ ಪೀಡಿತ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ ವಿರುದ್ಧ 18 ರನ್‌ಗಳ ರೋಚಕ ಜಯ ಸಾಧಿಸಿದೆ. ವೈಭವ್ ಸೂರ್ಯವಂಶಿ ಮತ್ತು ಅಭಿಗ್ಯಾನ್ ಕುಂಡು ಅವರ ಅರ್ಧಶತಕಗಳ ನೆರವಿನಿಂದ ಭಾರತ ಉತ್ತಮ ಮೊತ್ತ ಕಲೆಹಾಕಿತು.
09:17 AM (IST) Jan 18