ತಿರುವನಂತಪುರಂ: ಖಾಸಗಿ ಆಸ್ಪತ್ರೆಗಳಲ್ಲಿ ಮನಬಂದಂತೆ ಚಿಕಿತ್ಸಾ ವೆಚ್ಚ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಲು ಕಾನೂನು ಜಾರಿಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಕರಡು ಮಸೂದೆ ಸಿದ್ಧಪಡಿಸಲು ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ 4 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.
ಈ ಸಮಿತಿಯು ಖಾಸಗಿ ಆಸ್ಪತ್ರೆಗಳು ಮತ್ತು ಇತರ ಪಾಲುದಾರರೊಂದಿಗೆ ಚರ್ಚಿಸಿ, ಚಿಕಿತ್ಸಾ ವೆಚ್ಚ ತಗ್ಗಿಸುವುದು ಮತ್ತು ಸೇವೆಗಳಲ್ಲಿ ಪಾರದರ್ಶಕತೆ ತರುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಮುಖ್ಯವಾಗಿ ಆಸ್ಪತ್ರೆಗಳಲ್ಲಿ ಔಷಧಗಳ ಬೆಲೆ, ಲ್ಯಾಬ್ ಪರೀಕ್ಷೆಗಳು, ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್, ಕೊಠಡಿ ಬಾಡಿಗೆ ಹಾಗೂ ವಿವಿಧ ಚಿಕಿತ್ಸಾ ಶುಲ್ಕಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು.