ವಿಶ್ವದಲ್ಲೇ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಇದಕ್ಕೆ ಭಾರತ ಕೂಡ ಹೊರತಾಗಿಲ್ಲ. ಇದೀಗ ಭಾರತೀಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿ ಹಾಗೂ ಸುತ್ತ ಮುತ್ತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಎರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗು ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ವಾಯುಭಾರ ಕುಸಿತದ ಪರಿಣಾಮ ದೇಶದ ಕೆಲ ರಾಜ್ಯಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದಿದೆ
09:00 AM (IST) Jan 23
ನವದೆಹಲಿ: 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಸಿಸಿಐ ಅಂತಿಮ ಡೆಡ್‌ಲೈನ್ ನೀಡಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ
08:19 AM (IST) Jan 23
ವ್ಯಕ್ತಿಯೊಬ್ಬ ಒಂದೇ ಕಾರನ್ನು ನಕಲಿ ದಾಖಲೆ ಬಳಸಿ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ 8 ಬಾರಿ ಮಾರಾಟ ಮಾಡಿದ್ದಾನೆ. ಕಾರು ಮಾರಾಟವಾದ 24 ಗಂಟೆಯೊಳಗೆ ಅದನ್ನು ಮತ್ತೆ ಕದಿಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದು, ಆತನಿಗೆ 98 ವರ್ಷಗಳ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.
07:38 AM (IST) Jan 23
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಇತರ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದೇ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಿದೆ