ನವದೆಹಲಿ: ಆಂತರಿಕ ಸಂಘರ್ಷ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಭಾರತವಿರೋಧಿ ಮನಃಸ್ಥಿತಿಗೆ ತುಪ್ಪ ಸುರಿದು, ಭಾರತವು ಬಾಂಗ್ಲಾ ಮೇಲೆ ದಾಳಿ ಮಾಡುವಂತೆ ಪ್ರಚೋದಿಸಲು ಪಾಕಿಸ್ತಾನ ಯತ್ನಿಸುತ್ತಿದೆ ಎಂಬ ಸ್ಫೋಟಕ ವಿಚಾರವನ್ನು ಭಾರತದ ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.
ಪಾಕ್ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಬೆಂಬಲಿತ ಶಕ್ತಿಗಳು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್ ಪಕ್ಷಕ್ಕೆ ಭಾರತ ಬೆನ್ನೆಲುಬಾಗಿ ನಿಂತಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿವೆ. ಬಾಂಗ್ಲಾ ನಾಗರಿಕರನ್ನು ಭಾರತದ ವಿರುದ್ಧ ಎತ್ತಿಕಟ್ಟಿ, ಭಾರತವು ಬಾಂಗ್ಲಾ ಮೇಲೆ ದಾಳಿ ಮಾಡುವಂತೆ ಪ್ರಚೋದಿಸುವುದು ಇವರ ಉದ್ದೇಶ. ಕಳೆದ ವರ್ಷ ಹಸೀನಾ ಭಾರತಕ್ಕೆ ಪಲಾಯನಗೈದ ದಿನಗಳಿಂದಲೇ ಐಎಸ್‌ಐ ಈ ಕೆಲಸದಲ್ಲಿ ನಿರತವಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಈ ಮೂಲಕ ಭಾರತದ ವಿರುದ್ಧ ಇತರ ದೇಶಗಳನ್ನು ಎತ್ತಿಕಟ್ಟಿ ಮೈಕಾಯಿಸಿಕೊಳ್ಳುವ ಪಾಕಿಸ್ತಾನದ ಚಾಳಿ ಮತ್ತೊಮ್ಮೆ ಬಹಿರಂಗವಾಗಿದೆ.
10:20 AM (IST) Dec 24
ಭಾರತ ವಿರುದ್ಧದ ಜನವರಿ 11ರಿಂದ ಆರಂಭವಾಗಲಿರುವ ಏಕದಿನ ಮತ್ತು ಟಿ20 ಸರಣಿಗಾಗಿ ನ್ಯೂಜಿಲೆಂಡ್ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಕೇನ್ ವಿಲಿಯಮ್ಸನ್ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದ್ದು, ಮೈಕಲ್ ಬ್ರೇಸ್‌ವೆಲ್ ತಂಡವನ್ನು ಮುನ್ನಡೆಸಲಿದ್ದಾರೆ.
09:34 AM (IST) Dec 24
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗದ ಶಿಫarಸುಗಳನ್ನು ಅಳವಡಿಸಿಕೊಂಡರೆ ಮಾತ್ರ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
09:20 AM (IST) Dec 24
09:18 AM (IST) Dec 24
ಇಸ್ರೋ, ತನ್ನ LVM3-M6 ರಾಕೆಟ್ ಮೂಲಕ ಅಮೆರಿಕದ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಸಾಮಾನ್ಯ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸುವ ಗುರಿ ಹೊಂದಿದೆ.
09:00 AM (IST) Dec 24
ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸೀಂ ಮುನೀರ್, ಭಾರತದ ರಫೇಲ್, ಸುಖೋಯ್, ಎಸ್-400 ವ್ಯವಸ್ಥೆಗಳನ್ನು ಹೊಡೆದುರುಳಿಸಿದ್ದೇವೆ ಎಂದು ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾಗಿದ್ದಾರೆ.
08:50 AM (IST) Dec 24
ಅತಿಯಾದ ಫಾಸ್ಟ್‌ಫುಡ್ ಸೇವನೆಯಿಂದ 16 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಬರ್ಗರ್, ಪಿಜ್ಜಾ, ಮ್ಯಾಗಿ ಮೊದಲಾದ ಫಾಸ್ಟ್ ಫುಡ್‌ಗಳನ್ನೇ ಹೆಚ್ಚಾಗಿ ಸೇವಿಸುತ್ತಿದ್ದಳು.
08:36 AM (IST) Dec 24
ಭಾರತ ವಿರೋಧಿ ಯುವ ಮುಖಂಡ ಉಸ್ಮಾನ್ ಹದಿ ಹತ್ಯೆಯು ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಹತ್ಯೆಯ ಪಾರದರ್ಶಕ ತನಿಖೆಗೆ ಆಗ್ರಹಿಸಿರುವ ಇನ್‌ಕಿಲಾಬ್ ಮಂಚ್ ಪಕ್ಷ, ಮಧ್ಯಂತರ ಸರ್ಕಾರವನ್ನು ಪದಚ್ಯುತಗೊಳಿಸುವ ಎಚ್ಚರಿಕೆ ನೀಡಿದೆ.
08:18 AM (IST) Dec 24
ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಿದ ಹಗರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದೋಷಾರೋಪ ಹೊರಿಸಲು ದೆಹಲಿ ಕೋರ್ಟ್ ಆದೇಶಿಸಿದೆ. ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಇ.ಡಿ. ಸಲ್ಲಿಸಿದ್ದ ಆರೋಪಪಟ್ಟಿಯನ್ನು ಲಖನೌ ಕೋರ್ಟ್ ಸ್ವೀಕರಿಸಿದೆ.
08:05 AM (IST) Dec 24
ದೇಶದಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆ ಪರ್ವ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ 1,40,850 ರು. ಹಾಗೂ 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ತಲುಪಿ ಹೊಸ ದಾಖಲೆ ನಿರ್ಮಿಸಿದೆ. ಆರ್ಥಿಕ ಅನಿಶ್ಚಿತತೆ, ಅಮೆರಿಕದ ಬಡ್ಡಿ ದರ ಇಳಿಕೆ ಚಿನ್ನದತ್ತ ಹೂಡಿಕೆದಾರರನ್ನು ಸೆಳೆಯುತ್ತಿದೆ