ಮುಂಬೈ: ಎಐ (ಕೃತಕ ಬುದ್ಧಿಮತ್ತೆ) ಬಳಸಿ ರಚಿಸಿದ ನಟಿ ಶಿಲ್ಪಾ ಶೆಟ್ಟಿ ಮತ್ತು ಮಾರ್ಫ್ ಮಾಡಿದ ಫೋಟೋಗಳನ್ನು ಅತ್ಯಂತ ತೊಂದರೆದಾಯಕ ಮತ್ತು ಆಘಾತಕಾರಿ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಬಣ್ಣಿಸಿದೆ ಮತ್ತು ಅಂತಹ ಎಲ್ಲಾ ಲಿಂಕ್‌ಗಳು ತಕ್ಷಣವೇ ಅಳಿಸಿಹಾಕಲು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶಿಸಿದೆ. ತಮ್ಮ ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಮತ್ತು ತಮ್ಮ ತಿರುಚಿದ ಚಿತ್ರ/ವಿಡಿಯೋಗಳನ್ನು ತೆಗೆಯುವಂತೆ ವೆಬ್‌ಸೈಟ್‌ಗಳಿಗೆ ಆದೇಶಿಸಬೇಕು ಎಂದು ಕೋರಿ ನಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ.
