LIVE NOW
Published : Dec 06, 2025, 07:59 AM ISTUpdated : Dec 06, 2025, 03:52 PM IST

India Latest News Live: sculptor makeup - ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!

ಸಾರಾಂಶ

ಪೈಲಟ್‌ಗಳ ಕೊರತೆಯಿಂದ ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬ ಮುಂದುವರಿದಿದ್ದು, ಶುಕ್ರವಾರ 1000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡವು. ಇಂಡಿಗೋ ನಿತ್ಯ ನಡೆಸುವ 2300 ಸಂಚಾರದ ಪೈಕಿ ಅರ್ಧಕ್ಕರ್ಧ ಸಂಚಾರ ರದ್ದಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆಯೇ ಹೀಗೆ ಸಾವಿರಾರು ಸಂಚಾರ ರದ್ದಾಗುತ್ತಿರುವ ಕಾರಣ ದೇಶವ್ಯಾಪಿ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇದರ ಬೆನ್ನಲ್ಲೇ ವಿಮಾನಗಳ ರದ್ದು ಮತ್ತು ವಿಳಂಬಕ್ಕೆ ಕೊನೆ ಹಾಡುವ ಉದ್ದೇಶದಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ತಾನೇ ಕಳೆದ ತಿಂಗಳು ಪೈಲಟ್‌ಗಳ ಕರ್ತವ್ಯದ ಅವಧಿಗೆ ಕಡಿವಾಣ ಹಾಕಿ ಹೊರಡಿಸಿದ್ದ ಕಠಿಣ ನಿಯಮಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪೈಲಟ್‌ಗಳ ಲಭ್ಯತೆ ಶನಿವಾರದಿಂದ ಹೆಚ್ಚಾಗುವ ನಿರೀಕ್ಷೆ ಇದೆ. ಇನ್ನೊಂದೆಡೆ ಬೆಳವಣಿಗೆ ಕುರಿತು ತನಿಖೆಗೆ ಕೇಂದ್ರ ಸರ್ಕಾರ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.

minimal nose pin designs

03:52 PM (IST) Dec 06

sculptor makeup - ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!

ತುಂಬಾ ಸೊಗಸಾಗಿ ಕಾಣಬೇಕು ಎಂಬುದು ಬಹುತೇಕರ ಆಸೆ. ಅದೇ ರೀತಿ ಚೀನಾದಲ್ಲಿ ಈಗ ಹೆಣ್ಣು ಮಕ್ಕಳು ಚೆನ್ನಾಗಿ ಕಾಣುವುದಕ್ಕೆ ಕೃತಕ ಮೂಗಿನ ಮೊರೆ ಹೋಗಿದ್ದು, ಈ ಕೃತಕ ಮೂಗುಗಳು ಅವರನ್ನು ಗುರುತು ಸಿಗದಷ್ಟು ಬದಲಾಯಿಸಿ ಬಿಡುತ್ತವೆ.

Read Full Story

03:30 PM (IST) Dec 06

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮನತಣಿಸಲು ಸರ್ಕಾರ ದಿನಕ್ಕೊಂದು ಪದವಿ ನೀಡುತ್ತಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.

Read Full Story

02:47 PM (IST) Dec 06

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ, ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಬಾಬರಿ ಮಸೀದಿಯನ್ನು ಹೋಲುವ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

Read Full Story

01:29 PM (IST) Dec 06

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು

ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿಯವರ ₹1,120 ಕೋಟಿ ಮೌಲ್ಯದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರೊಂದಿಗೆ, ಯೆಸ್ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಮುಟ್ಟುಗೋಲು ಹಾಕಿಕೊಂಡ ಒಟ್ಟು ಆಸ್ತಿಗಳ ಮೌಲ್ಯ ₹10,117 ಕೋಟಿಗೆ ಏರಿದೆ. 

Read Full Story

01:12 PM (IST) Dec 06

ನಿರ್ಣಾಯಕ ಪಂದ್ಯದಲ್ಲಿ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 20 ಪಂದ್ಯಗಳ ನಂತರ ಭಾರತ ಟಾಸ್ ಗೆದ್ದಿದ್ದು, ತಂಡದಲ್ಲಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ.

Read Full Story

12:51 PM (IST) Dec 06

ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!

ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಆರಂಭಕ್ಕೆ ಕೆಲವೇ ಗಂಟೆ ಬಾಕಿ ಉಳಿದಿದೆ. ಹೀಗಿರುವಾಗಲೇ ಹರಿಣಗಳ ಪಡೆಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದಿದ್ದಾರೆ.

Read Full Story

12:36 PM (IST) Dec 06

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ

ಮನೆ ಮುಂದೆ ಹಸು ಸಗಣಿ ಹಾಕಿದ ವಿಚಾರಕ್ಕೆ ಸಂಬಂಧಿಕರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ. ತಾಯಿ ಮತ್ತು ಅತ್ತೆಯ ಜಗಳ ಬಿಡಿಸಲು ಹೋದ ಕಾನೂನು ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

Read Full Story

12:14 PM (IST) Dec 06

ಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧನಾ ಮೊದಲ ಪೋಸ್ಟ್ - ನಿಶ್ಚಿತಾರ್ಥ ಉಂಗುರ ನಾಪತ್ತೆ! ಏನಾಯ್ತು ಎಂದ ಫ್ಯಾನ್ಸ್

ನವದೆಹಲಿ: ಮದುವೆ ಮುಂದೂಡಿಕೆ ಬಳಿಕ ಭಾರತ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧನಾ ಇದೇ ಮೊದಲ ಸಲ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಆಕೆಯ ಎಂಗೇಜ್‌ಮೆಂಟ್ ರಿಂಗ್ ನಾಪತ್ತೆಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Read Full Story

11:43 AM (IST) Dec 06

ಪುರುಷರ ಕೊರತೆ - ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು

ಇಲ್ಲೊಂದು ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳೆಯರು ಗಂಡನನ್ನು ಬಾಡಿಗೆಗೆ ಪಡೆಯುತ್ತಾರೆ. ಹೌದು ಆ ದೇಶದಲ್ಲಿ ಲಿಂಗ ಅಸಮತೋಲನ ತೀವ್ರವಾಗಿದ್ದು, ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸಂಖ್ಯೆ ತೀರ ಕಡಿಮೆ ಇದೆ. ಇದೇ ಕಾರಣಕ್ಕೆ ಇಲ್ಲಿ ಪುರುಷರನ್ನು ಮಹಿಳೆಯರು ದುಡ್ಡು ನೀಡಿ ಬಾಡಿಗೆಗೆ ಪಡೆದುಕೊಳ್ಳುತ್ತಾರೆ.

Read Full Story

11:34 AM (IST) Dec 06

ದಕ್ಷಿಣ ಆಫ್ರಿಕಾ ಎದುರಿನ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಮೇಜರ್ ಚೇಂಜ್?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಬೌಲಿಂಗ್ ವಿಭಾಗದ ಬಗ್ಗೆ ಚಿಂತೆಯಲ್ಲಿರುವ ಟೀಂ ಇಂಡಿಯಾ, ಹ್ಯಾಟ್ರಿಕ್ ಶತಕದ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಲವನ್ನು ನೆಚ್ಚಿಕೊಂಡಿದೆ. 

Read Full Story

11:20 AM (IST) Dec 06

Gold Silver Price Today - ಚಿನ್ನದ ದರದಲ್ಲಿ ಏರಿಕೆನಾ? ಇಳಿಕೆನಾ?

ಇಂದು ದೇಶದಲ್ಲಿ 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ, ಇದು ಖರೀದಿದಾರರಿಗೆ ಉತ್ತಮ ಅವಕಾಶವನ್ನು ಸೂಚಿಸುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ, ಬೆಳ್ಳಿ ದರದಲ್ಲಿ ಗಮನಾರ್ಹ ಏರಿಕೆ ದಾಖಲಾಗಿದ್ದು, 1 ಕೆಜಿ ಬೆಳ್ಳಿಯ ಬೆಲೆ 3,000 ರೂ. ಹೆಚ್ಚಾಗಿದೆ.
Read Full Story

10:45 AM (IST) Dec 06

ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ

ಸುಮಾರು 10 ವರ್ಷಗಳಿಂದ ಭದ್ರತಾ ಪಡೆಗಳಿಂದ ತಪ್ಪಿಸಿಕೊಂಡಿದ್ದ ಅಂತಾರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆಗಾರ್ತಿ ಯಾಂಗ್ಚೆನ್ ಲಾಚುಂಗ್ಪಾಳನ್ನು ಇಂಡೋ-ಚೀನಾ ಗಡಿಯಲ್ಲಿ ಬಂಧಿಸಲಾಗಿದೆ. ಮಧ್ಯಪ್ರದೇಶ ಹುಲಿ ದಾಳಿ ಪಡೆ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಬಂಧನವಾಗಿದೆ.

Read Full Story

09:43 AM (IST) Dec 06

ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹಲವು ನಕಲಿ ಹಾಗೂ ಅಸ್ತಿತ್ವದಲ್ಲಿಲ್ಲದ ಕ್ಲಬ್‌ಗಳಿವೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ, ಅಭ್ಯರ್ಥಿ ವಿಎಂ ಮಂಜುನಾಥ್‌ ಅವರು ಚುನಾವಣಾ ಅಕ್ರಮ ತಡೆಯಲು ಆಗ್ರಹಿಸಿ ದೂರು ನೀಡಿದ್ದಾರೆ.

Read Full Story

09:04 AM (IST) Dec 06

ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

ವಿಶಾಖಪಟ್ಟಣಂನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿ ಗೆಲುವಿಗಾಗಿ ಸೆಣಸಲಿವೆ. 1-1ರಿಂದ ಸಮಬಲಗೊಂಡಿರುವ ಸರಣಿಯಲ್ಲಿ, ಭಾರತದ ಬ್ಯಾಟಿಂಗ್ ಕೊಹ್ಲಿ-ರೋಹಿತ್ ಮೇಲೆ ಅವಲಂಬಿತವಾಗಿದ್ದರೆ, ಬೌಲಿಂಗ್ ವಿಭಾಗವು ದುಬಾರಿಯಾಗಿದೆ.  

Read Full Story

More Trending News